ADVERTISEMENT

ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿ: ರಾಘವೇಂದ್ರ ಹಿಟ್ನಾಳ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 23:30 IST
Last Updated 29 ಅಕ್ಟೋಬರ್ 2025, 23:30 IST
<div class="paragraphs"><p>ರಾಘವೇಂದ್ರ ಹಿಟ್ನಾಳ</p></div>

ರಾಘವೇಂದ್ರ ಹಿಟ್ನಾಳ

   

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ, ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಹಾಲು ಮಹಾಮಂಡಳದ (ಕೆಎಂಎಫ್‌) ಪ್ರತಿನಿಧಿಯಾಗಿ (ಡೆಲಿಗೇಷನ್‌) ನಿಯೋಜನೆಗೊಂಡಿದ್ದಾರೆ.  

ರಾಬಕೊವಿಯ ಆಡಳಿತ ಮಂಡಳಿಯ ಸಭೆ ಬಳ್ಳಾರಿಯ ಕೇಂದ್ರ ಕಚೇರಿಯಲ್ಲಿ ಬುಧವಾರ ನಡೆಯಿತು. ಸಭೆಯಲ್ಲಿ 12 ಮತಗಳನ್ನು ಪಡೆದ ಹಿಟ್ನಾಳ ಪ್ರಾತಿನಿಧ್ಯ ತಮ್ಮದಾಗಿಸಿಕೊಂಡರು. 

ADVERTISEMENT

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನನ್ನ ಮೇಲೆ ವಿಶ್ವಾಸವಿಟ್ಟು ನಿರ್ದೇಶಕರು ಕೆಎಂಎಫ್‌ಗೆ ಪ್ರತಿನಿಧಿ ಮಾಡಿದ್ದಾರೆ. ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈ ವಿಷಯದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವರು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.