ADVERTISEMENT

ಕೆಎಂಎಫ್‌ ಅಧ್ಯಕ್ಷರ ಚುನಾವಣೆ 31ಕ್ಕೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2019, 20:15 IST
Last Updated 22 ಆಗಸ್ಟ್ 2019, 20:15 IST
ನಂದಿನಿ
ನಂದಿನಿ   

ಬೆಂಗಳೂರು: ‘ಇದೇ 31ರಂದು ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಸೇರಿದಂತೆ ಎಂಟು ಜನರು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಲೇವಾರಿ ಮಾಡಿದೆ.

ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ ಅವರು ಚುನಾವಣೆ ನಡೆಯಲಿರುವ ದಿನಾಂಕವನ್ನು ನ್ಯಾಯಪೀಠಕ್ಕೆ ತಿಳಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ.

ADVERTISEMENT

ಕಳೆದ ತಿಂಗಳ 29ರಂದು ನಡೆಯಬೇಕಿದ್ದ ಚುನಾವಣೆಯನ್ನು ರದ್ದುಪಡಿಸಿದ್ದ ಸಹಕಾರ ಇಲಾಖೆಯ ಆದೇಶ ಪ್ರಶ್ನಿಸಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹಗರಿಬೊಮ್ಮಹಳ್ಳಿಯ ಕಾಂಗ್ರೆಸ್‌ ಶಾಸಕ ಹಾಗೂ ಕೊಪ್ಪಳ ಹಾಲು ಒಕ್ಕೂಟದ ಅಧ್ಯಕ್ಷ ಎಲ್‌ಬಿಪಿ ಭೀಮಾ ನಾಯ್ಕ ಅವರು ಗುರುವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಡಾಲರ್ಸ್‌ ಕಾಲೋನಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಕೆಲಹೊತ್ತು ಮಾತುಕತೆ ನಡೆಸಿದರು.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.