ADVERTISEMENT

ಕೆಎಂಎಫ್‌ ನೌಕರರೂ ಪಿಸಿ ಕಾಯ್ದೆ ವ್ಯಾಪ್ತಿಗೆ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 4:31 IST
Last Updated 11 ಆಗಸ್ಟ್ 2022, 4:31 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಸಮಾಜದಲ್ಲಿ ಭಿನ್ನಭಿನ್ನ ಸ್ವರೂಪಗಳಲ್ಲಿ ವ್ಯಾಪಿಸಿರುವ ಲಂಚಗುಳಿತನ, ಸಾರ್ವಜನಿಕ ಆಡಳಿತಕ್ಕೆ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸಿದೆ’ ಎಂದು ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್‌, ‘ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ನೌಕರರೂ ಭ್ರಷ್ಟಾಚಾರ ನಿಗ್ರಹ (ಪಿಸಿ) ಕಾಯ್ದೆ ವ್ಯಾಪ್ತಿಗೆ ಒಳಪಡುತ್ತಾರೆ’ ಎಂದು ಮಹತ್ವದ ಆದೇಶ ನೀಡಿದೆ.

ಆದಾಯಕ್ಕೂ ಮೀರಿದ ಆಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿದ್ದ ನಂದಿನಿ ಮಿಲ್ಕ್ ಪ್ರಾಡಕ್ಟ್ಸ್‌ ವ್ಯವಸ್ಥಾಪಕ ನಿರ್ದೇಶಕ ವಿ.ಕೃಷ್ಣಾರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಕೆಎಂಎಫ್‌ ಸಾರ್ವಜನಿಕ ಸಂಸ್ಥೆಯಾಗಿರುವ ಕಾರಣ ಅದರ ಉದ್ಯೋಗಿಗ‌ಳನ್ನು ಸರ್ಕಾರಿ ಉದ್ಯೋಗಿಗಳೆಂದೇ ಪರಿಗಣಿಸಬೇಕಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದೆ.

‘ನಾನು ಕೆಎಂಎಫ್ ನೌಕರನಲ್ಲ. ಆದ್ದರಿಂದ ನಾನು ಭ್ರಷ್ಟಾಚಾರ ನಿಗ್ರಹ ಕಾಯ್ದೆ ವ್ಯಾಪ್ತಿಯಲ್ಲಿ ವಿಚಾರಣೆಗೆ ಯುಕ್ತನಲ್ಲ. ಆದ್ದರಿಂದ, ನನ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಬೇಕು‘ ಎಂದು ಕೃಷ್ಣಾರೆಡ್ಡಿ ಕೋರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.