ಡಿ.ಕೆ.ಶಿವಕುಮಾರ್ ಮತ್ತು ಕೆ.ಎನ್.ರಾಜಣ್ಣ
ತುಮಕೂರು: ‘ಅವರು (ಡಿ.ಕೆ.ಶಿವಕುಮಾರ್) ಆರ್‌ಎಸ್‌ಎಸ್ ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಜತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ’ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಡಿ.ಕೆ.ಶಿವಕುಮಾರ್ ಅಧಿವೇಶನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ ಬಗ್ಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದರು.
‘ಪ್ರಯಾಗ್‌ರಾಜ್‌ನ ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಬಡತನ ನಿವಾರಣೆಯಾಗುವುದಿಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದರ ನಂತರವೂ ಡಿ.ಕೆ.ಶಿವಕುಮಾರ್ ಹೋಗಿ ಪುಣ್ಯ ಸ್ನಾನ ಮಾಡಿದರು. ಅಂಬಾನಿ ಮಗನ ಮದುವೆಯ ಆಮಂತ್ರಣವನ್ನು ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಸ್ವೀಕರಿಸುವುದಿಲ್ಲ. ಅಂತಹ ಮದುವೆಗೆ ಇವರು (ಡಿಕೆಶಿ) ಕುಟುಂಬ ಸಮೇತ ಹೋಗುತ್ತಾರೆ’ ಎಂದು ಕಿಡಿಕಾರಿದರು.
‘ನಾವು ಯಾವುದೇ ಶಾಸಕರ, ಮಂತ್ರಿಗಳ ಸಭೆ ಕರೆಯುವ ಹಾಗಿಲ್ಲ. ಬೇರೆಯವರು ಕರೆಯಬಹುದು, ಮಾತಾಡಬಹುದು. ಇದಕ್ಕೆಲ್ಲ ಸೂಕ್ತ ಸಮಯದಲ್ಲಿ ಉತ್ತರ ನೀಡಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.