ಕೆ.ಎನ್ ರಾಜಣ್ಣ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಲಾಗಿದೆ.
ಸಚಿವ ಕೆ.ಎನ್ ರಾಜಣ್ಣ ಅವರನ್ನು ಸಚಿವ ಸಂಪುದಟದಿಂದ ವಜಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ಪತ್ರ ಬರೆದಿದ್ದರು. ಇದರ ಮಾಹಿತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ ಅವರು ಬರೆದ ಪತ್ರ ಪ್ರಜಾವಾಣಿಗೆ ಲಭ್ಯವಾಗಿದೆ.
‘ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕುವ ಕುರಿತು ಮಾನ್ಯ ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ಇದರೊಂದಿಗೆ ಕಳುಹಿಸಲು ನನಗೆ ಸೂಚಿಸಲಾಗಿದೆ’ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.