ತುಮಕೂರು: ಧರ್ಮಸ್ಥಳದ ಅನಾಮಿಕ ತಲೆಬುರುಡೆ ತಂದುಕೊಟ್ಟ ತಕ್ಷಣ ಆತನ ಬಗ್ಗೆ ಪೂರ್ವಪರ ವಿಚಾರಿಸದೆ, 164 ಹೇಳಿಕೆ ಪಡೆದು ಎಸ್‌ಐಟಿ ರಚಿಸಲಾಯಿತು. ತನಿಖೆಯ ಪ್ರಾರಂಭಿಕ ಹಂತದಲ್ಲಿ ಎಲ್ಲರೂ ಎಡವಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಎಲ್ಲಿಂದ ಬುರುಡೆ ತಂದಿದ್ದರು, ಕಾನೂನು ಪ್ರಕಾರವೇ ಗುಂಡಿಯಿಂದ ಬುರುಡೆ ಹೊರ ತೆಗೆಯಲಾಗಿದೆಯೇ? ಎಂಬುವುದನ್ನು ಪರಿಶೀಲಿಸಿದ್ದರೆ ಇಷ್ಟೆಲ್ಲಾ ರಾದ್ಧಾಂತ ಆಗುತ್ತಿರಲಿಲ್ಲ’ ಎಂದು ಹೇಳಿದರು.
‘ಧರ್ಮಸ್ಥಳಕ್ಕೆ ಅಪಕೀರ್ತಿ ತರುವ ಪ್ರಯತ್ನ ನಡೆಯಿತು. ಕೆಲ ಏಜೆನ್ಸಿಗಳು ವಿನಾಕಾರಣ ಈ ವಿಚಾರವನ್ನು ಬಹಳ ದೊಡ್ಡಮಟ್ಟಕ್ಕೆ ತೆಗೆದುಕೊಂಡು ಹೋದವು. ಕಂಡಲ್ಲಿ ಗುಂಡಿ ತೆಗೆದು ಅಲ್ಲಿನ ನಿವಾಸಿಗಳಿಗೆ ತೊಂದರೆ ನೀಡಲಾಯಿತು. ಪ್ರಾರಂಭದಲ್ಲಿ ಸಾಮಾನ್ಯ ಜ್ಞಾನ ಬಳಸಿದ್ದರೆ ಇದೆಲ್ಲ ಆಗುತ್ತಿರಲಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.