ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ ಧಾರಾಕಾರ ಮಳೆಯಾಗಿದ್ದು ಕಾಫಿ ಬೆಳೆಗಾರರು ಪರದಾಡುವಂತಾಗಿದೆ.
ಮಡಿಕೇರಿ, ವಿರಾಜಪೇಟೆ, ಗೋಣಿಕೊಪ್ಪಲು, ಬಾಳೆಲೆ, ದೇವರಪುರ, ತಾಳತ್ತಮನೆ, ಕಾಟಕೇರಿ, ಗಾಳಿಬೀಡು, ಮಾದಾಪುರ, ಭಾಗಮಂಡಲ ಸುತ್ತಮುತ್ತ ಮಳೆ ಆರ್ಭಟಿಸಿತು.
ಜಿಲ್ಲೆಯಲ್ಲಿ ಕಾಫಿ, ಭತ್ತದ ಕೊಯ್ಲು ನಡೆಯುತ್ತಿದ್ದು ಅಕಾಲಿಕ ಮಳೆಯಿಂದ ರೈತರಿಗೆ ನಷ್ಟವಾಗಿದೆ. ಕಾಫಿ ಒಣಗಿಸಲು ಸಾಧ್ಯವಾಗದೆ ಬೆಳೆಗಾರರು ಪರದಾಡುತ್ತಿದ್ದಾರೆ. ಕೊಯ್ಲು ಮಾಡದೆ ಉಳಿದಿರುವ ಕಾಫಿ ಹಣ್ಣು ನೆಲದ ಪಾಲಾಗುತ್ತಿದೆ. ಅಕಾಲಿಕ ಮಳೆಯಿಂದ ಕಾಫಿ ಕೊಯ್ಲಿಗೂ ಮುನ್ನವೇ ಹೂವು ಅರಳಿ ಮುಂದಿನ ವರ್ಷದ ಇಳುವರಿಯ ಮೇಲೂ ಪರಿಣಾಮ ಬೀರಲಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.