ಬೆಂಗಳೂರು: ಪ್ರಕೃತಿ ವಿಕೋಪದ ಕಾರಣಕ್ಕೆ ಮುಂದೂಡಲಾಗಿದ್ದ ಕೊಡಗು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್– ಜೆಡಿಎಸ್ ಮೈತ್ರಿಕೂಟ ಮೇಲುಗೈ ಸಾಧಿಸಿದೆ.
ಸೋಮವಾರಪೇಟೆ, ವಿರಾಜಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಿದೆ. ಬಿಜೆಪಿಗೆ ತನ್ನ ಭದ್ರನೆಲೆಯಲ್ಲಿ ಹಿನ್ನಡೆ ಆಗಿದೆ.
ಸೋಮವಾರಪೇಟೆ (ಕಾಂಗ್ರೆಸ್ –4, ಜೆಡಿಎಸ್–3, ಬಿಜೆಪಿ– 3, ಪಕ್ಷೇತರರು–1) ಮತ್ತು ವಿರಾಜಪೇಟೆಯಲ್ಲಿ (ಬಿಜೆಪಿ–8, ಕಾಂಗ್ರೆಸ್ –6, ಜೆಡಿಎಸ್ –1, ಪಕ್ಷೇತರರು–3) ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಕುಶಾಲನಗರದಲ್ಲಿ (ಕಾಂಗ್ರೆಸ್–6, ಬಿಜೆಪಿ–6, ಜೆಡಿಎಸ್– 4) ಸ್ವಂತ ಬಲದಿಂದ ಅಧಿಕಾರ ಹಿಡಿಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮೊದಲ ಬಾರಿಗೆ ಅಧಿಕಾರ ಚುಕ್ಕಾಣಿ ಹಿಡಿದಿದೆ. ಇಲ್ಲಿ 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 7, ಕಾಂಗ್ರೆಸ್ 4 ಸ್ಥಾನಗಳನ್ನು ಪಡೆದಿವೆ. ಜಿಲ್ಲೆಯ ಬಂಟ್ವಾಳ ತಾಲ್ಲೂಕು ಪಂಚಾಯಿತಿಯ ಸಂಗಬೆಟ್ಟು ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಿದೆ.
ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮೋಘಾ ಗ್ರಾಮ ಪಂಚಾಯಿತಿಯ ಎಲ್ಲ 8 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ಅಫಜಲಪುರ ಪುರಸಭೆಯ ವಾರ್ಡ್ ಸಂಖ್ಯೆ 19 ಬಿಜೆಪಿ ಪಾಲಾಗಿದೆ.
ಜಿ.ಪಂ. ಫಲಿತಾಂಶ: ಜಿಲ್ಲಾ ಪಂಚಾಯಿತಿಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 2, ಬಿಜೆಪಿ, ಜೆಡಿಎಸ್ ಮತ್ತು ಪಕ್ಷೇತರರಿಗೆ ತಲಾ1 ಸ್ಥಾನ ಸಿಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.