ADVERTISEMENT

ಕೊಡಗು: ಮತ್ತೆ 21 ದಿನ ಹೋಂ ಸ್ಟೇ, ರೆಸಾರ್ಟ್‌ ಬಂದ್

​ಪ್ರಜಾವಾಣಿ ವಾರ್ತೆ
Published 25 ಜೂನ್ 2020, 17:45 IST
Last Updated 25 ಜೂನ್ 2020, 17:45 IST
ಕೊಡಗು ಜಿಲ್ಲೆಯಲ್ಲಿ ಹೋಮ್ ‌ಸ್ಟೇ- ಸಾಂಕೇತಿಕ ಚಿತ್ರ
ಕೊಡಗು ಜಿಲ್ಲೆಯಲ್ಲಿ ಹೋಮ್ ‌ಸ್ಟೇ- ಸಾಂಕೇತಿಕ ಚಿತ್ರ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲೆಯ ಹೋಟೆಲ್‌, ರೆಸಾರ್ಟ್‌ ಹಾಗೂ ಹೋಂ ಸ್ಟೇಗಳನ್ನು ಮತ್ತೆ 21 ದಿನ ಬಂದ್‌ ಮಾಡಲು ತೀರ್ಮಾನಿಸಲಾಗಿದೆ.

ಪ್ರವಾಸೋದ್ಯಮಕ್ಕೆ ಸರ್ಕಾರ ಅವಕಾಶ ಕಲ್ಪಿಸಿದ್ದರೂ, ಜಿಲ್ಲೆಯ ಹಿತದೃಷ್ಟಿಯಿಂದ ಮುಂದಿನ ಮೂರು ವಾರಗಳ ಕಾಲ ಪ್ರವಾಸಿಗರಿಗೆ ವಾಸ್ತವ್ಯ ಒದಗಿಸದೇ ಇರಲು ನಿರ್ಧರಿಸಲಾಗಿದೆ. ಸಂಸ್ಥೆಗಳ ಸದಸ್ಯರು ತೀರ್ಮಾನಕ್ಕೆ ಕೈಜೋಡಿಸುವಂತೆ ಜಿಲ್ಲಾ ಹೋಟೆಲ್‌, ರೆಸಾರ್ಟ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್‌ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಹಾಗೂ ಹೋಂ ಸ್ಟೇ ಅಸೋಸಿಯೇಷನ್ ಅಧ್ಯಕ್ಷ ಬಿ.ಜಿ.ಅನಂತಶಯನ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT