ADVERTISEMENT

ಕೇರಳ, ಕೊಡಗು ಪ್ರವಾಹ: ನಕಲಿ ಬ್ಯಾಂಕ್ ಖಾತೆ; ಪೊಲೀಸರ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2018, 17:19 IST
Last Updated 21 ಆಗಸ್ಟ್ 2018, 17:19 IST

ಬೆಂಗಳೂರು: ಕೇರಳ ಹಾಗೂ ಕೊಡಗಿನ ಸಂತ್ರಸ್ತರಿಗೆ ಆರ್ಥಿಕ ನೆರವು ಒದಗಿಸುವ ನೆಪದಲ್ಲಿ ಹಲವರು ನಕಲಿ ಬ್ಯಾಂಕ್‌ ಖಾತೆಗಳನ್ನು ತೆರೆದಿದ್ದು, ಆ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಫೇಸ್‌ಬುಕ್ ಹಾಗೂ ಟ್ವಿಟರ್‌ಗಳಲ್ಲಿ ಪೋಸ್ಟ್‌ ಪ್ರಕಟಿಸಿರುವ ನಗರದ ಪೊಲೀಸರು, ‘ಸಾಮಾಜಿಕ ಜಾಲತಾಣಗಳಲ್ಲಿ ಹಲವು ಬ್ಯಾಂಕ್‌ ಖಾತೆಗಳ ವಿವರಗಳು ಹರಿದಾಡುತ್ತಿವೆ. ನೆರವು ನೀಡುವ ಮುನ್ನ ಸಾರ್ವಜನಿಕರು, ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸುವುದು ಸೂಕ್ತ’ ಎಂದು ಹೇಳಿದ್ದಾರೆ.

‘ಜನರ ನೆರವನ್ನೇ ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಆನ್‌ಲೈನ್‌ ಖದೀಮರು, ನಕಲಿ ಖಾತೆ ತೆರೆದು ಹಣ ದೋಚಲು ಮುಂದಾಗುತ್ತಿದ್ದಾರೆ. ಅಂಥವರನ್ನು ಪತ್ತೆ ಹಚ್ಚುವ ಕೆಲಸ ನಡೆದಿದೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.