
ಪ್ರಜಾವಾಣಿ ವಾರ್ತೆ
ಸುವರ್ಣ ವಿಧಾನಸೌಧ (ಬೆಳಗಾವಿ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕೊಡಗು ಜಿಲ್ಲಾ ಅಧಿಕಾರಿ ಕೆ.ಆರ್.ಕೃಷ್ಣಮೂರ್ತಿ ಅವರನ್ನು ಸರ್ಕಾರ ಅಮಾನತು ಮಾಡಿದೆ.
ವಸತಿನಿಲಯಗಳ ಅವ್ಯವಸ್ಥೆಯ ಬಗ್ಗೆ ಆರೋಪ ಮಾಡಿದ್ದ ವಿಧಾನ ಪರಿಷತ್ತಿನ ಸದಸ್ಯ ಎಂ.ಪಿ.ಕುಶಾಲಪ್ಪ ಅವರಿಗೆ ಸವಾಲು ಹಾಕಿದ್ದ ಕೃಷ್ಣಮೂರ್ತಿ, ‘ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವಸತಿನಿಲಯಗಳಿಗೆ ಭೇಟಿ ನೀಡಿ, ವರದಿ ನೀಡಲಿ’ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.
‘ಅಧಿಕಾರಿಯ ಹೇಳಿಕೆ ಸದನಕ್ಕೆ ಮಾಡಿರುವ ಅವಮಾನ’ ಎಂದು ಕುಶಾಲಪ್ಪ ಪರಿಷತ್‌ನಲ್ಲಿ ಪ್ರಸ್ತಾಪ ಮಾಡಿದ್ದರು. ಈ ವಿಚಾರವನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನದ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಿದ್ದರು.
ಕೊಡಗು ಜಿಲ್ಲಾಧಿಕಾರಿಯಿಂದ ವರದಿ ಪಡೆದು ಅವರನ್ನು ಅಮಾನತು ಮಾಡಲಾಗಿದೆ ಎಂದು ಸಭಾನಾಯಕ ಎನ್.ಎಸ್.ಬೋಸರಾಜು ಸದನದಲ್ಲಿ ಬುಧವಾರ ಪ್ರಕಟಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.