ADVERTISEMENT

ಮಡಿಕೇರಿ: ಕೋವಿಡ್‌ನಿಂದ ವ್ಯಕ್ತಿ ಸಾವು, 41 ಹೊಸ ಪ್ರಕರಣ

ಭಾಗಮಂಡಲ ಪೊಲೀಸ್ ಠಾಣೆ ಸಿಬ್ಬಂದಿಗೂ ಸೋಂಕು

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2020, 11:50 IST
Last Updated 3 ಆಗಸ್ಟ್ 2020, 11:50 IST
ಸಾಂಕೇರಿಕ ಚಿತ್ರ
ಸಾಂಕೇರಿಕ ಚಿತ್ರ   

ಮಡಿಕೇರಿ: ಜಿಲ್ಲೆಯಲ್ಲಿ ಕೋವಿಡ್‌ನಿಂದ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 41 ಹೊಸ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10ಕ್ಕೇರಿದೆ.

ಮಡಿಕೇರಿ ನಗರ ಮಹದೇವಪೇಟೆ ಬಳಿಯ ಅಬ್ದುಲ್ ಕಲಾಂ ಲೇಔಟ್‌ನ ನಿವಾಸಿ, 64 ವರ್ಷದ ಪುರುಷರೊಬ್ಬರು ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ಮೂರು ದಿನಗಳಿಂದ ಅವರಲ್ಲಿ ಕೆಮ್ಮು ಕಾಣಿಸಿಕೊಂಡಿತ್ತು. ಕೆಮ್ಮು ಸಂಬಂಧ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡುವಂತೆ ಸಲಹೆ ನೀಡಿದ್ದರು.

ಕಳೆದ ಎರಡು ದಿನಗಳಿಂದ ತುಂಬಾ ಸುಸ್ತನಿಂದ ಬಳಲುತ್ತಿದ್ದರು. ಭಾನುವಾರ ಸಂಜೆ 7 ಗಂಟೆಗೆ ಕೋವಿಡ್ ಆಸ್ಪತ್ರೆಗೆ ಬಂದು ದಾಖಲಾಗಿದ್ದರು. ರ್‍ಯಾಪಿಡ್‌ ಆ್ಯಂಟಿಜೆನ್‌‌ ಟೆಸ್ಟ್ ಕಿಟ್‌ ಮೂಲಕ ಗಂಟಲು ಹಾಗೂ ಮೂಗು ದ್ರವದ ಮಾದರಿಯನ್ನು ಪರೀಕ್ಷಿಸಲಾಗಿದ್ದು ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ತಕ್ಷಣ ಚಿಕಿತ್ಸೆ ಪ್ರಾರಂಭಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅದೇ ದಿನ ರಾತ್ರಿ 9.30 ಗಂಟೆಗೆ ಮೃತಪಟ್ಟಿದ್ದಾರೆ. ಮೃತದೇಹದ ಅಂತ್ಯ ಕ್ರಿಯೆಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.