ADVERTISEMENT

ಕೊಡಗಿನಲ್ಲಿ ವರುಣನ ಆರ್ಭಟ: ಪ್ರವಾಹ ಸ್ಥಿತಿ, ಜನಜೀವನ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 5:35 IST
Last Updated 7 ಆಗಸ್ಟ್ 2019, 5:35 IST
   

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು ನಿನ್ನೆಗಿಂತಲೂ ಬುಧವಾರ ತೀವ್ರತೆ ಪಡೆದುಕೊಂಡಿದ್ದು ಜನಜೀವನ ಸಂಪೂರ್ಣ ದುಸ್ತರವಾಗಿದೆ.

ಭಾಗಮಂಡಲದಲ್ಲಿ ಇನ್ನಷ್ಟು ನೀರು ಸಂಗ್ರಹಗೊಂಡಿದ್ದು ದ್ವೀಪವಾಗಿದೆ.ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದುಗ್ರಾಮೀಣ ಪ್ರದೇಶಗಳು ಕತ್ತಲೆಯಲ್ಲಿ ಮುಳುಗಿವೆ.

ಕಾವೇರಿ, ಲಕ್ಷ್ಮಣ ತೀರ್ಥ ನದಿಗಳು ಉಕ್ಕಿ ಹರಿಯುತ್ತಿವೆ. ಕರಡಿಗೋಡು, ನಾಪೋಕ್ಲು, ಭೇತ್ರಿ ಭಾಗದಲ್ಲಿ ಕಾವೇರಿ ನದಿಯು ಉಕ್ಕಿ ಹರಿಯುತ್ತಿರುವ ಪರಿಣಾಮ ನೂರಾರು ಎಕರೆ ಜಮೀನು ಜಲಾವೃತಗೊಂಡಿದೆ.

ADVERTISEMENT

ಈ ವರ್ಷ ಮೊದಲ ಬಾರಿಗೆ ಹಾರಂಗಿ ಜಲಾಶಯದ ಒಳಹರಿವು 9 ಸಾವಿರ ಕ್ಯುಸೆಕ್‌ ದಾಟಿದೆ. ಮಧ್ಯಾಹ್ನದ ವೇಳೆಗೆ ಮತ್ತಷ್ಟು ಹೆಚ್ಚಾಗಲಿದೆ. 2,859 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 2,842.55 ಅಡಿ ನೀರು ಸಂಗ್ರಹವಿದೆ. ನಿನ್ನೆ ಸಂಜೆಯಿಂದ ಇಂದು ಬೆಳಗ್ಗೆ 8ರ ಸುಮಾರಿಗೆ ಜಲಾಶಯಕ್ಕೆ 6 ಅಡಿಯಷ್ಟು ನೀರು ಹರಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.