ADVERTISEMENT

ಕೋಲಾರ ಅಭ್ಯರ್ಥಿ ಆಯ್ಕೆ: ಮುನಿಯಪ್ಪ ಮುನಿಸು ತಣಿಸಲು ಮುಂದಾದ ಹೈಕಮಾಂಡ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಮಾರ್ಚ್ 2024, 9:29 IST
Last Updated 30 ಮಾರ್ಚ್ 2024, 9:29 IST
ರಣದೀಪ್‌ ಸಿಂಗ್‌ ಸುರ್ಜೇವಾಲ
ರಣದೀಪ್‌ ಸಿಂಗ್‌ ಸುರ್ಜೇವಾಲ   ಕಡತ ಚಿತ್ರ

ಬೆಂಗಳೂರು: ಕೋಲಾರ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮುನಿಯಪ್ಪ ಮುನಿಸು ತಣಿಸಲು ಕಾಂಗ್ರೆಸ್‌ ಹೈಕಮಾಂಡ ಮುಂದಾಗಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಕೋಲಾರ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಸಾಮಾಜಿಕ ಜಾಲತಾಣ ’X’ನಲ್ಲಿ ಪೋಸ್ಟ್‌ ಮಾಡಿದ್ದಾರೆ

‘ಕೋಲಾರ ಟಿಕೆಟ್ ಆಯ್ಕೆ ವಿಚಾರದಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ಸಚಿವ ಮುನಿಯಪ್ಪ ಅವರು ಗೆಲ್ಲುವ ತಂತ್ರಗಾರಿಕೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು. ಎಸ್‌ಸಿ ಎಡಗೈ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದೂ ಅವರು ಮನವರಿಕೆ ಮಾಡಿಕೊಟ್ಟಿದ್ದರು ಎಂದು ಸುರ್ಜೇವಾಲ ಹೇಳಿದ್ದಾರೆ.

ADVERTISEMENT

ಮುಂದುವರಿದು, ಕೋಲಾರ ಕ್ಷೇತ್ರದ ಎಲ್ಲಾ ಕಾಂಗ್ರೆಸ್ ನಾಯಕರ ಅಭಿಪ್ರಾಯ ಕೂಡ ಕೇಳಿದ್ದೇವೆ. ಕೇಂದ್ರ ಚುನಾವಣಾ ಸಮಿತಿ ಯಾವುದೇ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೂ ಕೆಲಸ ಮಾಡುತ್ತೇವೆಂದು ಹೇಳಿದರು.  ವೈಯಕ್ತಿಕ  ಭಿನ್ನಾಭಿಪ್ರಾಯ ಏನೇ ಇದ್ದರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ ಇರುತ್ತೇವೆ ಎಂದೂ ಹೇಳಿದರು. ಏಳು ಬಾರಿ ಸಂಸದರಾಗಿರುವ ಮುನಿಯಪ್ಪ ಕೂಡ ಪಕ್ಷಕ್ಕಾಗಿ ಯಾವುದೇ ತ್ಯಾಗ ಮಾಡಲು ಸಿದ್ದ ಎಂದಿದ್ದಾರೆ. ಒಟ್ಟಿಗೆ ಚುನಾವಣಾ ನಡೆಸಿ ಅಭ್ಯರ್ಥಿಯನ್ನು ಗೆಲ್ಲಿಸುವ ಅಭಿಪ್ರಾಯ ಹೊಂದಿದ್ದಾರೆ’  ಎಂದು ಸುರ್ಜೇವಾಲ ಪೋಸ್ಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.