ADVERTISEMENT

ಕೋಳೂರು ಬಸವನಗೌಡ ನಿಧನ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 19:14 IST
Last Updated 25 ನವೆಂಬರ್ 2022, 19:14 IST
ಕೋಳೂರು ಬಸವನಗೌಡ
ಕೋಳೂರು ಬಸವನಗೌಡ   

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ಕೋಳೂರು ಬಸವನಗೌಡ (89) ಶುಕ್ರವಾರ ನಗರದ ತಮ್ಮ ಮನೆಯಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾದರು.

1999ರಿಂದ 2004ರವರೆಗೆ ಬಳ್ಳಾರಿ ಲೋಕಸಭಾ ಕ್ಷೇತ್ರವನ್ನು ಬಸವನ ಗೌಡ ಪ್ರತಿನಿಧಿಸಿದ್ದರು. ಕಾಂಗ್ರೆಸ್‌ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅವರು ಆಯ್ಕೆಯಾಗಿದ್ದರು.

ಅವರಿಗೆ ಪತ್ನಿ ಕಾಮಾಕ್ಷಮ್ಮ, ವೀರ ಶೈವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಬಿ.ಟಿ. ಪಾಟೀಲ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ADVERTISEMENT

1980ರಲ್ಲಿ ವೀರಶೈವ ಎಂಜಿನಿಯ ರಿಂಗ್‌ ಕಾಲೇಜು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.