ADVERTISEMENT

ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕೋನರಡ್ಡಿ ರಾಜೀನಾಮೆ ಘೋಷಣೆ

ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲು ಕಂಡ ಹಿನ್ನೆಲೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2021, 13:29 IST
Last Updated 7 ಸೆಪ್ಟೆಂಬರ್ 2021, 13:29 IST
ಎನ್.ಎಚ್. ಕೋನರಡ್ಡಿ
ಎನ್.ಎಚ್. ಕೋನರಡ್ಡಿ   

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಎನ್.ಎಚ್. ಕೋನರಡ್ಡಿ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಚುನಾವಣಾ ಉಸ್ತುವಾರಿಯೂ ಆಗಿದ್ದ ಕೋನರಡ್ಡಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಈ ಬಾರಿ ಕನಿಷ್ಠ 10 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು. ಪಕ್ಷ ಸಂಘಟನೆ ಕೈಗೊಂಡರೂ ಮತದಾರರು ನಮಗೆ ಮತ ಹಾಕಿಲ್ಲ. ವೈಫಲ್ಯದ ಹೊಣೆ ನಾನೇ ಹೊರುವೆ. ರಾಜೀನಾಮೆಯನ್ನು ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅವರಿಗೆ ಕಳುಹಿಸುತ್ತೇನೆ’ ಎಂದರು.

2013ರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ 9 ಸ್ಥಾನಗಳನ್ನು ಗಳಿಸಿತ್ತು. ಈ ಬಾರಿ ಒಂದು ಸ್ಥಾನವಷ್ಟೇ ಪಡೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.