ADVERTISEMENT

ಕೊಂಕಣ ರೈಲ್ವೆ ನಿಗಮಕ್ಕೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2021, 21:15 IST
Last Updated 25 ಆಗಸ್ಟ್ 2021, 21:15 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ರೈಲ್ವೆ ನಿಲ್ದಾಣಗಳಲ್ಲಿ ಅಂಗವಿಕಲರು ಓಡಾಡಲುಪ್ರತ್ಯೇಕ ಇಳಿಜಾರು ಪಥ ನಿರ್ಮಿಸುವಂತೆ ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ಕೊಂಕಣ ರೈಲ್ವೆ ನಿಗಮಕ್ಕೆ (ಕೆಆರ್‌ಸಿಎಲ್‌) ನೋಟಿಸ್ ನೀಡಲುಹೈಕೋರ್ಟ್ ಆದೇಶಿಸಿದೆ.

ಕಾರವಾರದ ರೈಲ್ವೆ ಯಾತ್ರಿ ಸಮಿತಿ ಅಧ್ಯಕ್ಷ ಜಾರ್ಜ್ ಫರ್ನಾಂಡೀಸ್ ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

‘ಅಂಗವಿಕಲರು ಎಲ್ಲರಂತೆ ತಳ್ಳಾಟ–ನೂಕಾಟದಲ್ಲಿ ತೆರಳಲು ಸಾಧ್ಯವಾಗುವುದಿಲ್ಲ. ಸುಪ್ರೀಂ ಕೋರ್ಟ್‌ ಆದೇಶದಂತೆ ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗಾಗಿಯೇ ಪ್ರತ್ಯೇಕ ಇಳಿಜಾರು ಪಥ ನಿರ್ಮಾಣ ಮಾಡಬೇಕು. ಈ ಸಂಬಂಧ ಕೊಂಕಣ ರೈಲ್ವೆ ನಿಗಮಕ್ಕೆ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.