ADVERTISEMENT

ಎಸ್‌ಸಿ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ₹ 5 ಲಕ್ಷ: ಕೋಟ ಶ್ರೀನಿವಾಸ ಪೂಜಾರಿ

ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 20:06 IST
Last Updated 9 ಆಗಸ್ಟ್ 2021, 20:06 IST
ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ   

ಬೆಂಗಳೂರು: ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡಲಾಗುವ ಸಹಾಯಧನದ ಮೊತ್ತವನ್ನು ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಇಲಾಖೆಯ ಅಧಿಕಾರಿಗಳ ಜತೆ ಸೋಮವಾರ ವಿಕಾಸಸೌಧದಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈಗ ಪರಿಶಿಷ್ಟ ಜಾತಿಯ (ಎಸ್‌ಸಿ) ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ತಲಾ ₹ 1.70 ಲಕ್ಷ ಸಹಾಯಧನ ನೀಡಲಾಗುತ್ತಿದೆ. ಈ ಮೊತ್ತದಲ್ಲಿ ಉತ್ತಮವಾದ ಮನೆ ನಿರ್ಮಾಣ ಅಸಾಧ್ಯ. ಆದ್ದರಿಂದ ಸಹಾಯಧನದ ಮೊತ್ತವನ್ನು ₹ 5 ಲಕ್ಷಕ್ಕೆ ಏರಿಕೆ ಮಾಡಲಾಗುವುದು’ ಎಂದರು.

ಸಹಾಯಧನ ಹೆಚ್ಚಳದಿಂದ ಉಂಟಾಗುವ ಹೊರೆಯನ್ನು ಭರಿಸುವುದಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಒಂದು ವರ್ಷದ ಅವಧಿಗೆ ಅನಗತ್ಯ ವೆಚ್ಚ ಮತ್ತು ಅನಿವಾರ್ಯವಲ್ಲದ ಯೋಜನೆಗಳಿಗೆ ಕಡಿವಾಣ ಹಾಕಲಾಗುವುದು. ಪರಿಶಿಷ್ಟ ಜಾತಿಯ ಜನರಿಗೆ ವಸತಿ,ಶೌಚಾಲಯ, ಶುದ್ಧ ಕುಡಿಯುವ ನೀರು, ಉತ್ತಮವಾದ ಆರೋಗ್ಯ ಸೌಲಭ್ಯ ಹಾಗೂ ಶಿಕ್ಷಣಕ್ಕೆ ನೆರವು ನೀಡುವುದಕ್ಕೆ ಆದ್ಯತೆ ನೀಡಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.