ADVERTISEMENT

ಅರ್ಚಕರಿಗೆ ಜನ್‌ಧನ್ ಸೌಲಭ್ಯ: ಸಚಿವ ಪೂಜಾರಿ

​ಪ್ರಜಾವಾಣಿ ವಾರ್ತೆ
Published 25 ಜುಲೈ 2020, 7:47 IST
Last Updated 25 ಜುಲೈ 2020, 7:47 IST
 ಸಚಿವ ಪೂಜಾರಿ
ಸಚಿವ ಪೂಜಾರಿ   

ಬೆಂಗಳೂರು: ಮುಜರಾಯಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್ ಸಿ ಮತ್ತು ಡಿ ವೃಂದದ ಸಿಬ್ಬಂದಿ ಹಾಗೂ ಅರ್ಚಕರನ್ನು 'ಜನಧನ್' ಯೋಜನೆಯಡಿ ನೋಂದಾಯಿಸಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ದೊರಕಿಸಿಕೊಡಬೇಕು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

'ಇಲಾಖೆ ವ್ಯಾಪ್ತಿಯ ದೇವಾಲಯಗಳ ಸಿಬ್ಬಂದಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯಡಿ ಸೇವೆ ಸಲ್ಲಿಸುತ್ತಿರುವ ಅರ್ಚಕರಿಗೆ ಅನಿರೀಕ್ಷಿತವಾಗಿ ಅಪಘಾತಗಳು ಸಂಭವಿಸಿದಲ್ಲಿ, ಅವರ ಅವಲಂಬಿತ ಕುಟುಂಬಕ್ಕೆ ಆರ್ಥಿಕ ಭದ್ರತೆ ಒದಗಿಸಲು ಕ್ರಮಕೈಗೊಳ್ಳಿ‘ ಎಂದು ಇಲಾಖೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.

'ಜನಧನ್ ಯೋಜನೆಯಡಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಜ್ಯೋತಿ ಬಿಮಾ ಯೋಜನೆ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್‍ನ ಗ್ರೂಪ್ ಪರ್ಸನಲ್ ಆಕ್ಸಿಡೆಂಟ್ ವಿಮಾ ಯೋಜನೆಗಳಡಿ ನೋಂದಾಯಿಸಲು ಕ್ರಮವಹಿಸಿ' ಎಂದು ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.