ADVERTISEMENT

‘ದೇವಳಗಳ ಆದಾಯದಲ್ಲಿ ಗೋಶಾಲೆಗೆ ನೆರವು’- ಕೋಟ ಶ್ರೀನಿವಾಸ ಪೂಜಾರಿ

ಮುಜರಾಯಿ ಸಚಿವ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2020, 22:46 IST
Last Updated 2 ಆಗಸ್ಟ್ 2020, 22:46 IST
ಬ್ರಹ್ಮಾವರ ಬಳಿಯ ನೀಲಾವರ ಗೋಶಾಲೆಗೆ ಭಾನುವಾರ ಭೇಟಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರೊಂದಿಗೆ ಸಮಾಲೋಚನೆ ನಡೆಸಿದರು.
ಬ್ರಹ್ಮಾವರ ಬಳಿಯ ನೀಲಾವರ ಗೋಶಾಲೆಗೆ ಭಾನುವಾರ ಭೇಟಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರೊಂದಿಗೆ ಸಮಾಲೋಚನೆ ನಡೆಸಿದರು.   

ನೀಲಾವರ(ಬ್ರಹ್ಮಾವರ): ‘ರಾಜ್ಯದ ಎ ಮತ್ತು ಬಿ ಶ್ರೇಣಿಯ ದೇವಸ್ಥಾನಗಳ ವಾರ್ಷಿಕ ಆದಾಯದ ಶೇ 2ರಷ್ಟು ಮೊತ್ತವನ್ನು ಆಯಾ ಜಿಲ್ಲೆಗಳ ನೋಂದಾಯಿತ ಗೋಶಾಲೆಗಳಿಗೆ ನೆರವಿನ ರೂಪದಲ್ಲಿ ನೀಡಲು ಅನುವಾಗುವಂತೆ ಶೀಘ್ರದಲ್ಲಿ ಮುಜರಾಯಿ ಇಲಾಖೆಯಿಂದ ಆದೇಶ ಹೊರಡಿಸಲಾಗುವುದು’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬ್ರಹ್ಮಾವರ ಬಳಿಯ ನೀಲಾವರ ಗೋಶಾಲೆಗೆ ಭಾನುವಾರ ಭೇಟಿ ನೀಡಿದ ಅವರು ಚಾರ್ತುಮಾಸ್ಯ ವ್ರತದಲ್ಲಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ. ಗೋಶಾಲೆಗಳ ನಿರ್ವಹಣೆಯ ಕುರಿತು ಸಮಾಲೋಚನೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.

‘ಗೋಶಾಲೆಗಳಿಗೆ ನೆರವು ನೀಡುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ, ಒಪ್ಪಿಗೆ ಪಡೆದು ಆದೇಶ ಹೊರಡಿಸಲಾಗುವುದು’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.