
ಪ್ರಜಾವಾಣಿ ವಾರ್ತೆ
ಕೋಟ ಶ್ರೀನಿವಾಸ ಪೂಜಾರಿ
ನವದೆಹಲಿ: ಬೆಳೆ ವಿಮೆ ಬಿಡುಗಡೆಯಾಗದೆ ಕಾಳುಮೆಣಸು, ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ತರಿಸಿಕೊಮಡು ಬೆಳೆ ವಿಮೆಯನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದರು.
ಲೋಕಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಚಿಕ್ಕಮಗಳೂರು ಜಿಲ್ಲೆಯಲ್ಲಿ 39,000 ರೈತರಿಗೆ ಬೆಳೆ ವಿಮೆ ಸಿಕ್ಕಿಲ್ಲ. ಮಳೆ ಮಾಪನ ಕೇಂದ್ರಗಳು ಹಾಳಾಗಿರುವ ಕಾರಣ ಸಮಸ್ಯೆ ಸೃಷ್ಟಿಯಾಗಿದೆ. ಬೆಳೆ ವಿಮೆ ಸಕಾಲಕ್ಕೆ ಬಾರದ ಕಾರಣ ಆಕ್ರೋಶದಿಂದ ರೈತರು ಹೋರಾಟ ಮಾಡುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಗಮನ ಹರಿಸಬೇಕು’ ಎಂದು ಆಗ್ರಹಿಸಿದರು.