ADVERTISEMENT

ದೆಹಲಿಗೆ ತೆರಳಿದ ಡಿ.ಕೆ. ಶಿವಕುಮಾರ್‌: ಹೈಕಮಾಂಡ್‌ ಜೊತೆ ಚರ್ಚೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 11:14 IST
Last Updated 17 ಆಗಸ್ಟ್ 2020, 11:14 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌   

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿನ ಸದ್ಯದ ಬೆಳವಣಿಗೆಗಳು ಹಾಗೂ ಪಕ್ಷದ ಕಾರ್ಯಕ್ರಮಗಳ ಕುರಿತು ಹೈಕಮಾಂಡ್‌ ಜೊತೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೋಮವಾರ ಬೆಳಿಗ್ಗೆ ದೆಹಲಿಗೆ ತೆರಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಬಳಿಕ ಅವರು ಇದೇ ಮೊದಲ ಬಾರಿಗೆ ದೆಹಲಿಗೆ ತೆರಳುತ್ತಿದ್ದಾರೆ. ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಲಾಕ್‌ಡೌನ್ ಜಾರಿಗೊಂಡ ಕಾರಣ ಹೈಕಮಾಂಡ್‌ ಜೊತೆಗೆ ಶಿವಕುಮಾರ್‌ ಅವರ ಮುಖಾಮುಖಿ ಸಾಧ್ಯವಾಗಿರಲಿಲ್ಲ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆಗೆ ವಿಡಿಯೊ ಸಂವಾದದಲ್ಲಿ ಶಿವಕುಮಾರ್‌ ಮಾತುಕತೆ ನಡೆಸಿದ್ದರು. ಕೋವಿಡ್‌ ಸಂದರ್ಭದಲ್ಲಿ ರಾಜ್ಯದಲ್ಲಿ ಪಕ್ಷ ಮಾಡುತ್ತಿರುವ ಕೆಲಸಗಳ ಬಗ್ಗೆ ಆ ವೇಳೆಯಲ್ಲಿ ಮಾಹಿತಿ ನೀಡಿದ್ದರು.

ADVERTISEMENT

ಪಕ್ಷದ ಸಂಘಟನೆ ಹಾಗೂ ಆಂತರಿಕ ಬೆಳವಣಿಗೆಗಳ ಕುರಿಕು ಕೂಡಾ ಹೈಕಮಾಂಡ್‌ಗೆ ಶಿವಕುಮಾರ್‌ ಮಾಹಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಶಿವಕುಮಾರ್ ಅವರ ಜೊತೆಗೆ ಅವರ ಸಹೋದರ, ಸಂಸದ ಡಿ.ಕೆ. ಸುರೇಶ್ ಕೂಡಾ ದೆಹಲಿಗೆ ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.