ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರ ಬಗ್ಗೆ ಸುಳ್ಳು ಹಾಗೂ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ಆರೋಪದಡಿ ಬಿಜೆಪಿ ರಾಜ್ಯ ಘಟಕದ ‘ಎಕ್ಸ್’ ಖಾತೆ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕೀಲರ ಘಟಕವು ಸೈಬರ್ ಅಪರಾಧ ಠಾಣೆಗೆ ಶುಕ್ರವಾರ ದೂರು ನೀಡಿದೆ.
ದೂರು ಆಧರಿಸಿ ಸೈಬರ್ ಠಾಣೆಯ ಪೊಲೀಸರು ಎನ್‌ಸಿಆರ್ (ಗಂಭೀರವಲ್ಲದ) ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಬಿಜೆಪಿ ‘ಎಕ್ಸ್’ ಖಾತೆಯಲ್ಲಿ ಜ.29ರಂದು ಪೋಸ್ಟ್ ಹಾಕಲಾಗಿತ್ತು. ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ತಿರುಚಿದ ಫೋಟೊ ಹಂಚಿಕೊಳ್ಳುವ ಮೂಲಕ ಸಾಂವಿಧಾನಿಕ ಹುದ್ದೆಯಲ್ಲಿ ಇರುವ ನಾಯಕರ ಫೋಟೊಗಳನ್ನು ದುರುದ್ದೇಶಪೂರ್ವಕವಾಗಿ ಬಳಸಿಕೊಳ್ಳಲಾಗಿದೆ. ಇದರಿಂದ ಸಮಾಜದಲ್ಲಿ ಗೊಂದಲ, ಅಶಾಂತಿ ಸೃಷ್ಟಿಗೆ ಯತ್ನಿಸಲಾಗುತ್ತಿದೆ. ಹೀಗಾಗಿ, ಬಿಜೆಪಿ ‘ಎಕ್ಸ್’ ಖಾತೆಯ ನಿರ್ವಾಹಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿಯ ವಕೀಲರ ಘಟಕದ ಪದಾಧಿಕಾರಿಗಳು ದೂರಿನಲ್ಲಿ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.