ಬೆಂಗಳೂರು: ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ವಿಧಾನ ಪರಿಷತ್‌ಗೆ ನಾಮನಿರ್ದೇಶನಗೊಂಡಿರುವುದಕ್ಕೆ ಜೆಡಿಎಸ್ ಅಪಸ್ವರ ಎತ್ತಿದೆ.
ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ವಂಚಕ ರಮೇಶ್ ಬಾಬು ಹೆಸರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡಿರುವುದು ಎಷ್ಟು ಸರಿ? ಎಂದು ಜೆಡಿಎಸ್ ಪ್ರಶ್ನಿಸಿದೆ.
ಸಿದ್ದರಾಮಯ್ಯ ಅವರೇ, ರಮೇಶ್ ಬಾಬು ವಿರುದ್ಧ ಹಲವು ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ ಎಂದು ರಮೇಶ್ ಬಾಬು ವಿರುದ್ಧ ಕೋರ್ಟ್‌ನಲ್ಲಿ ದಾಖಲಾಗಿದೆ ಎನ್ನಲಾಗಿರುವ ಪ್ರಕರಣದ ಪ್ರತಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡು ಪೋಸ್ಟ್ ಮಾಡಿದೆ.
ಕಳಂಕಿತ ರಮೇಶ್ ಬಾಬು ಅವರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡದಂತೆ ರಾಜ್ಯಪಾಲರ ಬಳಿ ದೂರು ಸಲ್ಲಿಕೆಯಾಗಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ, ಫೋರ್ಜರಿ ಸಹಿಗಳ ಮೂಲಕ ಹತ್ತು ಹಲವು ಭೂ ಅವ್ಯವಹಾರದಲ್ಲಿ ತೊಡಗಿರುವ ಭೂಗಳ್ಳನ ಹೆಸರನ್ನು ಮೇಲ್ಮನೆಗೆ ನಾಮನಿರ್ದೇಶನ ಮಾಡಿರುವ ಕಾಂಗ್ರೆಸ್ ಸರ್ಕಾರಕ್ಕೆ ಇದು ಶೋಭೆಯೇ? ಎಂದು ಪ್ರಶ್ನಿಸಿದೆ.
ರಮೇಶ್ ಬಾಬು ಅವರು ಈ ಮೊದಲು ಜೆಡಿಎಸ್‌ನಲ್ಲಿದ್ದರು. ಆ ನಂತರ ಕಾಂಗ್ರೆಸ್ ಸೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.