ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ನವದೆಹಲಿ: ಕೇಂದ್ರ ಸರ್ಕಾರದಿಂದ ತೆರಿಗೆ ಪಾಲಿನಲ್ಲಿ ಹಾಗೂ ಅನುದಾನ ಹಂಚಿಕೆಯಲ್ಲಿ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಕಾನೂನು ಹಾಗೂ ಮಾನವ ಹಕ್ಕು ಘಟಕದ ವತಿಯಿಂದ ಆಗಸ್ಟ್ 1ರಂದು ಜಂತರ್ ಮಂತರ್‌ನಲ್ಲಿ ‘ದೆಹಲಿ ಚಲೋ’ ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ 200 ವಕೀಲರು ಭಾಗವಹಿಸಲಿದ್ದಾರೆ. ಬಳಿಕ ರಾಷ್ಟ್ರಪತಿ ಹಾಗೂ ಕೇಂದ್ರ ಹಣಕಾಸು ಸಚಿವರಿಗೆ ಮನವಿ ಸಲ್ಲಿಸಲಾಗುವುದು. ಒಂದು ವೇಳೆ ಕೇಂದ್ರ ಸರ್ಕಾರವು ತಾರತಮ್ಯ ಸರಿಪಡಿಸದಿದ್ದರೆ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಕಾನೂನು ಘಟಕದ ಅಧ್ಯಕ್ಷ ಸಿ.ಎಂ. ಧನಂಜಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.