ADVERTISEMENT

ದಿನೇಶ್ ವಿದೇಶ ಪ್ರವಾಸ ನಾಯಕರ ಆಕ್ಷೇಪ

ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಟೀಕೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2019, 19:18 IST
Last Updated 2 ಜುಲೈ 2019, 19:18 IST
ದಿನೇಶ್ ಗುಂಡೂರಾವ್‌ 
ದಿನೇಶ್ ಗುಂಡೂರಾವ್‌    

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ಆರಂಭವಾಗಿದ್ದು, ಕಾಂಗ್ರೆಸ್ ಶಾಸಕರು ರಾಜೀನಾಮೆಗೆ ಮುಂದಾಗಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.

ಶಾಸಕ ಆನಂದ್ ಸಿಂಗ್ ರಾಜೀನಾಮೆ ಸಲ್ಲಿಸಿದ್ದು, ರಮೇಶ್ ಜಾರಕಿಹೊಳಿ ರಾಜೀ ನಾಮೆ ಪ್ರಕಟಿಸಿ
ದ್ದಾರೆ. ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರದ ಅಸ್ತಿತ್ವ ಅಲುಗಾಡುತ್ತಿದೆ. ಇಂತಹ ಸಮಯದಲ್ಲಿ ಪಕ್ಷದ ಅಧ್ಯಕ್ಷರು ವಿದೇಶ ಪ್ರವಾಸ ಕೈಗೊಂಡಿರುವುದಕ್ಕೆ ಪಕ್ಷದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಹ ವಿದೇಶ ಪ್ರವಾಸದಲ್ಲಿ ಇದ್ದಾರೆ. ಇದೇ ಸಮಯದಲ್ಲಿ ಕಾಂಗ್ರೆಸ್ ಅಧ್ಯಕ್ಷರು ಇಲ್ಲವಾದರೆ ಪರಿಸ್ಥಿತಿ ನಿಭಾಯಿಸುವವರು ಯಾರು ಎಂಬ ಪ್ರಶ್ನೆ ಪಕ್ಷದ ವಲಯದಲ್ಲಿ ಮೂಡಿದೆ. ಸರ್ಕಾರವನ್ನೇ ಅಲುಗಾಡಿಸುವಂತಹ ರಾಜಕೀಯ ಚಟುವಟಿಕೆಗಳು ನಡೆ ಯುತ್ತಿರುವ ಇಂತಹ ಸಂದರ್ಭದಲ್ಲಿ ವಿದೇಶ ಪ್ರವಾಸತೆರಳಿರುವುದಕ್ಕೆ ಪಕ್ಷದ ಹಿರಿಯ ನಾಯಕರು, ವರಿಷ್ಠರು ಆಕ್ಷೇಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.