ADVERTISEMENT

ಸಿ.ಎಂ. ಇಬ್ರಾಹಿಂ ಭೇಟಿಯಾದ ಡಿ.ಕೆ ಶಿವಕುಮಾರ್ ಮಾತುಕತೆ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 7:03 IST
Last Updated 13 ಡಿಸೆಂಬರ್ 2020, 7:03 IST
ಸಿ.ಎಂ. ಇಬ್ರಾಹಿಂ ಭೇಟಿಯಾದ ಡಿ.ಕೆ ಶಿವಕುಮಾರ್ ಚರ್ಚೆ
ಸಿ.ಎಂ. ಇಬ್ರಾಹಿಂ ಭೇಟಿಯಾದ ಡಿ.ಕೆ ಶಿವಕುಮಾರ್ ಚರ್ಚೆ   

ಬೆಂಗಳೂರು: ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರನ್ನುಕೆಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶನಿವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಬೆಂಗಳೂರಿನ ಬೆನ್ಸನ್ ಟೌನ್ ನಲ್ಲಿರುವ ಇಬ್ರಾಹಿಂ ಅವರ ಮನೆಗೆ ತೆರಳಿದ ಶಿವಕುಮಾರ್, ಸದ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಇತ್ತೀಚೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಇಬ್ರಾಹಿಂ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.

ADVERTISEMENT

ಇಬ್ರಾಹಿಂ ಮತ್ತೆ ಜೆಡಿಎಸ್ ಸೇರಲು ಒಲವು ತೋರಿದ್ದಾರೆ. ರಾಜ್ಯದಾದ್ಯಂತ ಪ್ರವಾಸ ಮಾಡಿ ಜೆಡಿಎಸ್ ಸೇರುವ ಬಗ್ಗೆ ಅಂತಿಮ ತೀರ್ಮಾನ ತಿಳಿಸುವುದಾಗಿ ಇಬ್ರಾಹಿಂ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.