ADVERTISEMENT

ಸಿಎಂ ಸ್ಥಾನಕ್ಕೆ ₹2,500 ಕೋಟಿ ಎಂದಿರುವ ಯತ್ನಾಳ್ ಮಾನಸಿಕ ಅಸ್ವಸ್ಥರಲ್ಲ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 7 ಮೇ 2022, 5:06 IST
Last Updated 7 ಮೇ 2022, 5:06 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್   

ಹುಬ್ಬಳ್ಳಿ: ಮುಖ್ಯಮಂತ್ರಿ ಮಾಡುವುದಕ್ಕೆ ₹ 2,500 ಕೋಟಿ ಕೇಳಿದ್ದರು ಎಂದು ಶಾಸಕ ಬಸನಗೌಡ ಪಾಟೀಲ ಬಹಿರಂಗವಾಗಿ ಹೇಳಿದ್ದಾರೆ. ಆದರೆ, ಇಡಿ, ಸಿಬಿಐ ಸೇರಿದಂತೆ ಯಾವುದೇ ತನಿಖಾ ಸಂಸ್ಥೆ ಕ್ರಮ ವಹಿಸಿಲ್ಲ. ಇದರಲ್ಲಿ ಯಾರ ರಕ್ಷಣೆ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು.

ಇಲ್ಲಿನ ಸುದ್ದಿಗಾರರೊಂದಿಗೆ‌ ಮಾತನಾಡಿದ ಅವರು, ಸಂವಿಧಾನ ಸುಡುವ ಕೆಲಸವಾಗುತ್ತಿದೆ. ಮುಖ್ಯಮಂತ್ರಿ ಯಾರನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ ಎಂದು ಸ್ಪಷ್ಟಪಡಿಸಬೇಕು ಎಂದರು.

ಯತ್ನಾಳ್ ಅವರನ್ನು ಕೂಡಲೇ ವಶಕ್ಕೆ ಪಡೆಯಬೇಕು. ಅವರನ್ನ ಸಾಕ್ಷಿಯಾಗಿಸಿಕೊಂಡು ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.

ADVERTISEMENT

ಬಿಜಿಪಿ‌ ರಾಜ್ಯಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹ ಇದರಲ್ಲಿ ಭಾಗಿಯಾಗಿದ್ದಾರೆ. ಅವರು ಸಹ ಭ್ರಷ್ಟರ ರಕ್ಷಣೆ ಮಾಡುವುದರಲ್ಲಿ ನಿರತರಾಗಿದ್ದಾರೆ. ಯತ್ನಾಳ್‌ ಅವರು ಈ ರೀತಿ ಹೇಳಿಕೆ ನೀಡಲು ಮಾನಸಿಕ ಅಸ್ವಸ್ಥರಲ್ಲ. ಬಿಜೆಪಿಯವರು ಸಾಲು, ಸಾಲು ಹಗರಣ ಮಾಡುತ್ತಿದ್ದಾರೆ. ಹೋಟೆಲ್‌ನಲ್ಲಿ ತಿಂಡಿಗೆ ದರ ನಿಗದಿ ಮಾಡುವಂತೆ ಸರ್ಕಾರಿ ಹುದ್ದೆಗಳು ಸೇಲ್ ಆಗುತ್ತಿವೆ ಎಂದರು.

ನಾವು ಸಿಎಂ ರಾಜೀನಾಮೆಗೆ ಒತ್ತಾಯಿಸಲ್ಲ ತನಿಖೆ ನಡೆಯಲಿ‌ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.