ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ದೋಷಾರೋಪ ಪಟ್ಟಿ ಸಲ್ಲಿಸಿದ್ದು ಅವರು ಸದ್ಯವೇ ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ದುರುಪಯೋಗ, ಅಕ್ರಮವಾಗಿ ಹಣ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 16– 17 ತಿಂಗಳಿಂದ ಜಾಮೀನಿನ ಮೇಲೆ ಇದ್ದರು. ಇನ್ನು ಯಾರೂ ರಕ್ಷಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ದೋಷಾರೋಪ ಪಟ್ಟಿಯಲ್ಲಿನ ಅಂಶಗಳನ್ನು ಗಮನಿಸಿದರೆ ನ್ಯಾಯಾಲಯ ಅವರಿಗೆ ದೊಡ್ಡ ಮಟ್ಟದ ಶಿಕ್ಷೆ ವಿಧಿಸುವುದು ಸ್ಪಷ್ಟ. ಸದಾ ನೈತಿಕತೆ ಬಗ್ಗೆ ಮಾತನಾಡುವ ಕಾಂಗ್ರೆಸ್‌ನವರು ಈ ದೋಷಾರೋಪದ ಆಧಾರದಲ್ಲಿ ಏನು ಉತ್ತರ ಕೊಡುತ್ತಾರೆ ಎಂದೂ ಅವರು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.