ADVERTISEMENT

ಅಕ್ಕಿ ಕಡಿತ: ಪತ್ರ ಚಳವಳಿ ನಾಳೆ

​ಪ್ರಜಾವಾಣಿ ವಾರ್ತೆ
Published 1 ಮೇ 2021, 21:53 IST
Last Updated 1 ಮೇ 2021, 21:53 IST
ಆರ್.ಧ್ರುವನಾರಾಯಣ
ಆರ್.ಧ್ರುವನಾರಾಯಣ   

ಮೈಸೂರು: ‘ರಾಜ್ಯ ಸರ್ಕಾರ, ಬಿಪಿಎಲ್‌ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು ನೀಡುತ್ತಿದ್ದ ಪಡಿತರದಲ್ಲಿ ಅಕ್ಕಿ ಕಡಿತಗೊಳಿಸಿರುವುದನ್ನು ಖಂಡಿಸಿ, ಮೇ 3ರಂದು ರಾಜ್ಯದೆಲ್ಲೆಡೆ ಕಾಂಗ್ರೆಸ್‌ನಿಂದ ಪತ್ರ ಚಳವಳಿ ನಡೆಸಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಶನಿವಾರ ಇಲ್ಲಿ ತಿಳಿಸಿದರು.

‘ಅಕ್ಕಿಯ ಬದಲಿಗೆ ರಾಗಿ, ಜೋಳ ಕೊಡುವುದಾಗಿ ಸಬೂಬು ಹೇಳುವುದು ಬೇಡ. ಅದನ್ನು ಹೆಚ್ಚುವರಿಯಾಗಿ ಕೊಡಲಿ. ಅದರಿಂದ ಹೆಚ್ಚಿನ ಭಾರವೇನೂ ಆಗಲ್ಲ’ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ರಾಜ್ಯ ಸರ್ಕಾರಕ್ಕೆ ಬದ್ಧತೆಯೇ ಇಲ್ಲವಾಗಿದೆ. ಇದರ ಪರಿಣಾಮವಾಗಿಯೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸಿಗದಾಗಿದೆ. ಈಗಾಗಲೇ ರಾಜ್ಯದ ಜನರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯ, ಭ್ರಷ್ಟಾಚಾರದ ವಿರುದ್ಧ ಮತ ಚಲಾಯಿಸಿದ್ದಾರೆ’ ಎಂದು ಧ್ರುವನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.