ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) 2015ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 428 ಹುದ್ದೆಗಳ ನೇಮಕಾತಿಗೆ 1:5 ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ ಅರ್ಹರಾದವರ ಪರಿಷ್ಕೃತ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.
ವ್ಯಕ್ತಿತ್ವ ಪರೀಕ್ಷೆ ಆಯ್ಕೆಯಾಗಿದ್ದ 30 ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಮತ್ತು ಕನ್ನಡ ಕಡ್ಡಾಯ ಪರೀಕ್ಷೆಯಲ್ಲಿ ಪರೀಕ್ಷಾ ನಿಯಮ ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಕೆಪಿಎಸ್‌ಸಿ ಪಟ್ಟಿಯಿಂದ ಕೈಬಿಟ್ಟಿತ್ತು. ಅಲ್ಲದೆ, 1:5 ಅನುಪಾತದಲ್ಲಿ ಆಯ್ಕೆಯಾದವರಿಗೆ ಈಗಾಗಲೇ ವ್ಯಕ್ತಿತ್ವ ಪರೀಕ್ಷೆಯನ್ನೂ ಮಾಡಿದೆ. ಕೆಪಿಎಸ್‌ಸಿ ತಮ್ಮನ್ನು ಕೈ ಬಿಟ್ಟಿದ್ದನ್ನು ಪ್ರಶ್ನಿಸಿ 13 ಅಭ್ಯರ್ಥಿಗಳು ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಮೊರೆ ಹೋಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.