ADVERTISEMENT

ಕೆಪಿಎಸ್‌ಸಿ: ‍ಪ್ರವೇಶ ಪತ್ರ ಡೌನ್‌ಲೋಡ್‌ಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2021, 20:14 IST
Last Updated 17 ಜನವರಿ 2021, 20:14 IST

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಮತ್ತು ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಸಹಾಯಕರು (ಎಸ್‌ಡಿಎ), ಪ್ರಥಮ ದರ್ಜೆ ಸಹಾಯಕರ (ಎಫ್‌ಡಿಎ) ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಇದೇ 23 ಮತ್ತು 24ರಂದು ನಡೆಸಲಿರುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಸಂಬಂಧ ‘ಪ್ರವೇಶ ಪತ್ರ’ಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಆಯೋಗದ ವೆಬ್‍ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.

ಅಭ್ಯರ್ಥಿಗಳು ಪರೀಕ್ಷೆ ದಿನದವರೆಗೆ ಕಾಯದೆ ಮೊದಲೇ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಂಡು, ಅದರ ಪ್ರಿಂಟ್ ತೆಗೆದುಕೊಳ್ಳಬೇಕು. ಅಲ್ಲದೆ, ಪರೀಕ್ಷಾ ಉಪಕೇಂದ್ರವನ್ನು ಮೊದಲೇ ನೋಡಿಕೊಳ್ಳಬೇಕು ಎಂದೂ ಆಯೋಗದ ತಿಳಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕ ಮತ್ತು ಮೀಸಲಾತಿ ಆಧಾರದಲ್ಲಿ ಪಾರದರ್ಶಕವಾಗಿ ನೇಮಕಾತಿ ನಡೆಯ
ಲಿದೆ. ಹೀಗಾಗಿ, ಹುದ್ದೆಗಳಿಗೆ ಆಯ್ಕೆ ಮಾಡಿಸಿಕೊಡುವುದಾಗಿ ಆಶ್ವಾಸನೆ ನೀಡುವ ಮಧ್ಯವರ್ತಿಗಳ ಮಾತಿಗೆ ಅಭ್ಯರ್ಥಿಗಳು ಮೋಸ ಹೋಗಬಾರದು. ಸಹಾಯಕ್ಕೆ ಆಯೋಗದ ಸಹಾಯವಾಣಿ 080- 22356487 ಅಥವಾ 080- 2226
8356 ಸಂಖ್ಯೆಗೆ ಕರೆ ಮಾಡಬಹುದು ಎಂದೂ ಆಯೋಗದ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.