ADVERTISEMENT

KPSC ಪರೀಕ್ಷೆ ಮುಂದೂಡಿಕೆ: ಪರಿಷ್ಕೃತ ದಿನಾಂಕ ಶೀಘ್ರದಲ್ಲೇ ಪ್ರಕಟ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2025, 12:47 IST
Last Updated 21 ಮಾರ್ಚ್ 2025, 12:47 IST
ಕೆಪಿಎಸ್‌ಸಿ
ಕೆಪಿಎಸ್‌ಸಿ    

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ), 2023–24ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರಿ ಗ್ರೂಪ್‌ 'ಎ' ಮತ್ತು 'ಬಿ' ವೃಂದದ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಗೆ ನಿಗದಿ ಮಾಡಿದ್ದ ದಿನಾಂಕವನ್ನು ಮುಂದೂಡಿರುವುದಾಗಿ ತಿಳಿಸಿದೆ.

ಮುಖ್ಯ ಪರೀಕ್ಷೆಯನ್ನು ಮಾರ್ಚ್‌ 28, 29, ಏಪ್ರಿಲ್‌ 1 ಹಾಗೂ 2ರಂದು ನಡೆಸುವುದಾಗಿ ಕೆಪಿಎಸ್‌ಸಿ ಫೆಬ್ರುವರಿ 13ರಂದು ಪ್ರಕಟಿಸಿದ್ದ ಅಧಿಸೂಚನೆಯಲ್ಲಿ ಹೇಳಿತ್ತು. ಇದೀಗ, ಕಾರಣಾಂತರಗಳಿಂದಾಗಿ ಪರೀಕ್ಷೆ ಮುಂದೂಡಿರುವುದಾಗಿ ಹೇಳಿಕೆ ಬಿಡುಗಡೆ ಮಾಡಿದೆ.

ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲೇ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸುವುದಾಗಿ ಉಲ್ಲೇಖಿಸಿದೆ.

ADVERTISEMENT
2023-24 GP Mains exam date postpone press note.pdf
ಓಪನ್ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.