ADVERTISEMENT

ಏಪ್ರಿಲ್ 22– 30ರವರೆಗೆ ನಡೆಯಬೇಕಿದ್ದ ಕೆಪಿಎಸ್‌ಸಿ ಪರೀಕ್ಷೆಗಳು ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 9:54 IST
Last Updated 21 ಏಪ್ರಿಲ್ 2021, 9:54 IST
ಕೆಪಿಎಸ್‌ಸಿ
ಕೆಪಿಎಸ್‌ಸಿ   

ಬೆಂಗಳೂರು: ಏಪ್ರಿಲ್ 22ರಿಂದ 30ರವರೆಗೆ ನಡೆಯಬೇಕಿದ್ದ 2020ರದ್ವಿತೀಯ ಅಧಿವೇಶನ ಇಲಾಖಾ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

ಪರೀಕ್ಷೆಗಳನ್ನು ಬರೆಯಲು ಏಪ್ರಿಲ್ 22ರಿಂದ 28ರವರೆಗೆ ಅಭ್ಯರ್ಥಿಗಳು ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರು ಪರೀಕ್ಷಾ ಕೇಂದ್ರಕ್ಕೆ ಆಗಮಿಸಬೇಕಿತ್ತು. ಏಪ್ರಿಲ್ 29 ಮತ್ತು 30ರಂದು ವಿಭಾಗೀಯ ಕೇಂದ್ರಕ್ಕೆ ಅಭ್ಯರ್ಥಿಗಳು ಹಾಜರಿಬೇಕಿತ್ತು.

ಆದರೆ, ಕೋವಿಡ್ ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರವು ಏಪ್ರಿಲ್‌ 21ರಿಂದ ಮೇ 5ರವರೆಗೆ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ವಿಧಿಸಿದೆ. ಹೀಗಾಗಿ, ಏಪ್ರಿಲ್ 22ರಿಂದ ಏಪ್ರಿಲ್ 30ರವರೆಗೆ ನಡೆಯಬೇಕಿದ್ದ ಇಲಾಖಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ದಿನಗಳಲ್ಲಿ ಆಯೋಗದ ಅಂತರ್ಜಾಲದಲ್ಲಿ ಪರೀಕ್ಷಾ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.