ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ ಒಟ್ಟು 384 ಹುದ್ದೆಗಳ ಆಯ್ಕೆಗೆ ಡಿ. 29ರಂದು ನಡೆದಿದ್ದ ಪೂರ್ವಭಾವಿ ಮರು ಪರೀಕ್ಷೆಯ ಫಲಿತಾಂಶವನ್ನು ಕೆಪಿಎಸ್‌ಸಿ ಸೋಮವಾರ ರಾತ್ರಿ ಪ್ರಕಟಿಸಿದೆ.
ಪೂರ್ವಭಾವಿ ಪರೀಕ್ಷೆಯಿಂದ 1:15 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ನೋಂದಣಿ ಸಂಖ್ಯೆಯನ್ನು ಕೆಪಿಎಸ್‌ಸಿ ತನ್ನ ವೆಬ್ ಸೈಟ್‌ನಲ್ಲಿ ಪ್ರಕಟಿಸಿದೆ. ಪೂರ್ವಭಾವಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಪೈಕಿ 5,760 ಅಭ್ಯರ್ಥಿ ಗಳು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.
ಮುಖ್ಯ ಪರೀಕ್ಷೆಯನ್ನು ಮಾರ್ಚ್ 28, 29, ಏಪ್ರಿಲ್ 1 ಮತ್ತು 2ರಂದು ನಡೆಸಲಾಗುವುದು ಎಂದು ತಾತ್ಕಾಲಿಕ ದಿನಾಂಕವನ್ನು ಕೆಪಿಎಸ್‌ಸಿ ಈಗಾಗಲೇ ಪ್ರಕಟಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.