
ಕೆಪಿಎಸ್‌ಸಿ
ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ 384 ಹುದ್ದೆಗಳಿಗೆ ನೇಮಕಾತಿಗೆ ನಡೆದ ಮುಖ್ಯ ಪರೀಕ್ಷೆಯಿಂದ 1:3 ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ (ಸಂದರ್ಶನ) ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಎಸ್‌ಸಿ ಸೋಮವಾರ ಪ್ರಕಟಿಸಿದೆ.
ಮುಖ್ಯ ಪರೀಕ್ಷೆಯು 2025ರ ಮೇ 3, 5, 7 ಮತ್ತು 9ರಂದು ನಡೆದಿತ್ತು.
ಈ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆಯದೆ, ಹೈಕೋರ್ಟ್ ಮತ್ತು ಕರ್ನಾಟಕ ಆಡಳಿತ ನ್ಯಾಯಮಂಡಳಿ ಮೆಟ್ಟೀಲೇರಿ ಷರತ್ತುಬದ್ಧ ಅನುಮತಿ ಪಡೆದು ಮುಖ್ಯ ಪರೀಕ್ಷೆ ಬರೆದ 300ಕ್ಕೂ ಹೆಚ್ಚು ಅಭ್ಯರ್ಥಿಗಳಲ್ಲಿ ಆರು ಮಂದಿ ವ್ಯಕ್ತಿತ್ವ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ ಎಂದು ಕೆಪಿಎಸ್‌ಸಿ ಮೂಲಗಳು ತಿಳಿಸಿವೆ.
ಡಿ. 29ರಂದು ಈ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆದಿತ್ತು. ಆದರೆ, ಇಂಗ್ಲಿಷ್‌ನಿಂದ ಕನ್ನಡಕ್ಕೆ ಭಾಷಾಂತರಿಸಿದ್ದ ಪ್ರಶ್ನೆ ಮತ್ತು ಉತ್ತರಗಳಲ್ಲಿ ಲೋಪದ ಕಾರಣಕ್ಕೆ ಮತ್ತೆ ಪೂರ್ವಭಾವಿ ಪರೀಕ್ಷೆ ನಡೆಸಬೇಕು ಎಂದು ಅಭ್ಯರ್ಥಿಗಳು ಕೋರ್ಟ್ ಮೆಟ್ಟಿಲೇರಿದ್ದರು. ಮುಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದ ಕೋರ್ಟ್, ಅರ್ಜಿಯನ್ನು ಮುಂದಿನ ದಿನಗಳಲ್ಲಿ ಪರಿಗಣಿಸುವುದಾಗಿ ತಿಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.