ADVERTISEMENT

ಕೆಎಎಸ್‌: ಮಾರ್ಚ್ ಅಂತ್ಯದಲ್ಲಿ ಮುಖ್ಯ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2024, 15:31 IST
Last Updated 10 ಡಿಸೆಂಬರ್ 2024, 15:31 IST
ಕೆಪಿಎಸ್‌ಸಿ
ಕೆಪಿಎಸ್‌ಸಿ    

ಬೆಂಗಳೂರು: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಡಿ.29ರಂದು ಪೂರ್ವಭಾವಿ ಪರೀಕ್ಷೆಯನ್ನು ಮತ್ತೆ ನಡೆಸಲು ಈಗಾಗಲೇ ನಿರ್ಧರಿಸಿರುವ ಕೆಪಿಎಸ್‌ಸಿ, 2025ರ ಮಾರ್ಚ್‌28, 29, ಏಪ್ರಿಲ್ 1 ಮತ್ತು 2ರಂದು ಮುಖ್ಯ ಪರಿಕ್ಷೆ ನಡೆಸಲು ದಿನ ನಿಗದಿಪಡಿಸಿದೆ.

ಈ ಬಗ್ಗೆ ಕೆಪಿಎಸ್‌ಸಿ ಕಾರ್ಯದರ್ಶಿ ರಮಣದೀಪ್ ಚೌಧರಿ ಅವರು ಪ್ರಕಟಣೆ ಹೊರಡಿಸಿದ್ದಾರೆ. ಆದರೆ, ಅಧಿಸೂಚನೆಯನ್ನು ಇನ್ನಷ್ಟೆ ಹೊರಡಿಸಬೇಕಿದೆ.

ಈ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಆಗಸ್ಟ್‌ 27ರಂದು ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಆದರೆ, ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಇಂಗ್ಲಿಷ್‌ನಿಂದ ಕನ್ನಡಕ್ಕೆ ಭಾಷಾಂತರಿಸಿದ ಪ್ರಶ್ನೆ– ಉತ್ತರಗಳಲ್ಲಿ ತಪ್ಪುಗಳು ಕಾಣಿಸಿಕೊಂಡ ಕಾರಣಕ್ಕೆ ಡಿ. 29ಕ್ಕೆ ಮರು ಪರೀಕ್ಷೆ ನಿಗದಿಯಾಗಿದೆ.

ADVERTISEMENT

ಮರು ಪರೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿ ಧಾರವಾಡ ಮತ್ತು ಬೆಂಗಳೂರು ಹೈಕೋರ್ಟ್‌ ಪೀಠದಲ್ಲಿ ವಿಚಾರಣಾ ಹಂತದಲ್ಲಿದೆ. ಈ ನಡುವೆಯೇ ಮುಖ್ಯ ಪರೀಕ್ಷೆಗೆ ಕೆಪಿಎಸ್‌ಸಿ ದಿನ ನಿಗದಿಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.