ADVERTISEMENT

KPSC: ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ವೃಂದದ ಮುಖ್ಯ ಪರೀಕ್ಷೆ ಇಂದು

​ಪ್ರಜಾವಾಣಿ ವಾರ್ತೆ
Published 3 ಮೇ 2025, 0:26 IST
Last Updated 3 ಮೇ 2025, 0:26 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರಿ ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ವೃಂದದ 384 ಹುದ್ದೆಗಳ ನೇಮಕಕ್ಕೆ ಶನಿವಾರದಿಂದ (ಮೇ 3) ಮುಖ್ಯ ಪರೀಕ್ಷೆ ಆರಂಭವಾಗಲಿದೆ.

‍ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆಯದಿದ್ದರೂ ಮುಖ್ಯಪರೀಕ್ಷೆ ಬರೆಯಲು ಕೋರ್ಟ್ ಮೊರೆ ಹೋಗಿದ್ದ ಅಭ್ಯರ್ಥಿಗಳಿಗೆ ನ್ಯಾಯಾಲಯ ಅನುಮತಿ ನೀಡಿದೆ. 

ADVERTISEMENT

‘ಅನುಮತಿ ಪಡೆದಿರುವ ಅಭ್ಯರ್ಥಿಗಳಿಗೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಕಸ್ತೂರಬಾ ನಗರದ ಬಿಬಿಎಂಪಿ ಸಂಯೋಜಿತ ಪಿಯು ಕಾಲೇಜಿನಲ್ಲಿ ಪರೀಕ್ಷೆ ಆಯೋಜಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿಯೇ ಬೆಳಿಗ್ಗೆ 8ರ ಒಳಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಪಡೆದುಕೊಳ್ಳಬಹುದು’ ಎಂದು ಕೆಪಿಎಸ್‌ಸಿ ಮೂಲಗಳು ತಿಳಿಸಿವೆ.

‘ಮುಖ್ಯ ಪರೀಕ್ಷೆ ಬರೆಯಲು 500ಕ್ಕೂ ಹೆಚ್ಚು ಅಭ್ಯರ್ಥಿಗಳು ಹೈಕೋರ್ಟ್‌ನಿಂದ ಅನುಮತಿ ಪಡೆದುಕೊಂಡಿದ್ದಾರೆ. ಶುಕ್ರವಾರ (ಮೇ 2) ಸಂಜೆಯ ಒಳಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಪಡೆಯಲು ಎಲ್ಲರಿಗೂ ಸಾಧ್ಯವಾಗಿಲ್ಲ. ಹೀಗಾಗಿ ಪರೀಕ್ಷಾ ಕೇಂದ್ರದಲ್ಲೇ ಆ ವ್ಯವಸ್ಥೆ ಮಾಡಲಾಗಿದೆ’ ಎಂದು ಮೂಲಗಳು ಮಾಹಿತಿ ನೀಡಿವೆ.

ಅರ್ಹತಾ ಪರೀಕ್ಷೆ ಕನ್ನಡ ಬೆಳಿಗ್ಗೆ 10ರಿಂದ 12 ಗಂಟೆಯವರೆಗೆ, ಇಂಗ್ಲಿಷ್‌ ಪರೀಕ್ಷೆ ಅದೇ ದಿನ ಮಧ್ಯಾಹ್ನ 2ರಿಂದ 4ರವರೆಗೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.