ADVERTISEMENT

KPSC: ಇನ್ಮುಂದೆ 20ಸಾವಿರಕ್ಕಿಂತ ಕಡಿಮೆ ಅಭ್ಯರ್ಥಿಗಳಿದ್ದರೆ ಕಂಪ್ಯೂಟರ್ ‍ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2023, 4:40 IST
Last Updated 9 ಜನವರಿ 2023, 4:40 IST
KPSC
KPSC   

ಬೆಂಗಳೂರು: ಯಾವುದೇ ವೃಂದದ ಹುದ್ದೆಗಳಿಗೆ 20 ಸಾವಿರಕ್ಕಿಂತಲೂ ಕಡಿಮೆ ಅರ್ಜಿಗಳು ಸಲ್ಲಿಕೆಯಾದರೆ ಅಭ್ಯರ್ಥಿಗಳ ಆಯ್ಕೆಗೆ ಇನ್ನು ಮುಂದೆ ‘ಕಂಪ್ಯೂಟರ್‌ ಆಧಾರಿತ ಲಿಖಿತ ಪರೀಕ್ಷೆ’ (ಸಿಬಿಆರ್‌ಟಿ) ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಿರ್ಧರಿಸಿದೆ.

‘ಸಿಬಿಆರ್‌ಟಿ ಮಾದರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕೆಂಬ ಉದ್ದೇಶದಿಂದ ಜ.7 ರಂದು ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲಾಗಿತ್ತು. ಪ್ರಾಯೋಗಿಕವಾಗಿ ನಡೆಸಿದ ಈ ಪರೀಕ್ಷೆ ಯಶಸ್ವಿಯಾಗಿದೆ. ಹೀಗಾಗಿ, ಈ ಮಾದರಿಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ತಿಳಿಸಿದರು.

ಡಿ. 3 ರಂದು ನಡೆದ ಆಯೋಗದ ಸಭೆಯಲ್ಲಿ ನಿರ್ಣಯಿಸಿದಂತೆ, ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲು ಡಿ.22 ರಂದು ಅಧಿಸೂಚನೆ ಹೊರಡಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.