ADVERTISEMENT

400 ಪಶು ವೈದ್ಯಾಧಿಕಾರಿಗಳ ಹುದ್ದೆ: ಅರ್ಹತೆ ಪಡೆದ 621 ಅಭ್ಯರ್ಥಿಗಳ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 15:35 IST
Last Updated 12 ಫೆಬ್ರುವರಿ 2026, 15:35 IST
ಕೆಪಿಎಸ್‌ಸಿ
ಕೆಪಿಎಸ್‌ಸಿ   

ಬೆಂಗಳೂರು: ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಗ್ರೂಪ್‌ ‘ಎ’ ವೃಂದದ 58 ಬ್ಯಾಕ್‌ಲಾಗ್‌ ಸೇರಿ ಒಟ್ಟು 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಒಟ್ಟು 621 ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಎಸ್‌ಸಿ ಗುರುವಾರ ಪ್ರಕಟಿಸಿದೆ.

ಈ ಹುದ್ದೆಗಳ ನೇಮಕಾತಿಗೆ ಇದೇ ಜ. 9ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದ ಕೆಪಿಎಸ್‌ಸಿ, ತ್ವರಿತವಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 600 ಅಂಕಗಳಿಗೆ ನಡೆದ ಈ ಪರೀಕ್ಷೆಯಲ್ಲಿ ಅರ್ಹತೆ ಗಳಿಸಲು ಕನಿಷ್ಠ 210 (ಶೇ 35) ಅಂಕ ಪಡೆಯಬೇಕಿತ್ತು. ಆದರೆ, ಈ ಅಂಕ ಗಳಿಸಲು ಅಭ್ಯರ್ಥಿಗಳು ವಿಫಲರಾದ ಕಾರಣ 1:3 ಅನುಪಾತದಲ್ಲಿ ಅರ್ಹರು ಲಭ್ಯರಾಗಿಲ್ಲ ಎಂದು ಕೆಪಿಎಸ್‌ಸಿ ಮೂಲಗಳು ತಿಳಿಸಿವೆ. 

ಬೆಂಗಳೂರು ನಗರದ ಮೂರು ಕೇಂದ್ರಗಳಲ್ಲಿ ಜ. 8ರಂದು ನಡೆದ ಕನ್ನಡ ಭಾಷಾ ಪರೀಕ್ಷೆಗೆ 629 ಹಾಗೂ 9ರಂದು ನಡೆದ ಸಾಮಾನ್ಯ ಪತ್ರಿಕೆ ಮತ್ತು ನಿರ್ದಿಷ್ಟ ಪತ್ರಿಕೆಯ ಪರೀಕ್ಷೆಗೆ 1,447 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಕೆಪಿಎಸ್‌ಸಿ ಅವಕಾಶ ಕಲ್ಪಿಸಿತ್ತು. ಪರೀಕ್ಷೆಯ ಉತ್ತರ ಪತ್ರಿಕೆಗಳ ಸ್ಕ್ಯಾನಿಂಗ್ ಕಾರ್ಯವನ್ನು ಕೇವಲ ಮೂರು ದಿನಗಳಲ್ಲಿ ಪೂರ್ಣಗೊಳಿಸಿ, ಕೀ ಉತ್ತರಗಳನ್ನು ಕೆಪಿಎಸ್‌ಸಿ ಪ್ರಕಟಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.