ADVERTISEMENT

ಕೆಪಿಟಿಸಿಎಲ್‌: ಅಂತಿಮ ಆಯ್ಕೆ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2025, 14:46 IST
Last Updated 29 ಆಗಸ್ಟ್ 2025, 14:46 IST
   

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್‌ನ) ಕಿರಿಯ ಸ್ಟೇಷನ್‌ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

433 ಕಿರಿಯ ಸ್ಟೇಷನ್‌ ಪರಿಚಾರಕ ಹುದ್ದೆ, 90 ಕಿರಿಯ ಪವರ್‌ಮ್ಯಾನ್‌ ಹುದ್ದೆಗಳು ಸೇರಿ ಒಟ್ಟು 523 ನಿರ್ವಹಣಾ ಪದ ವೃಂದದ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟಗೊಂಡಿದೆ. ಈ ಹುದ್ದೆಗಳ ನೇಮಕಾತಿಗೆ ಮೇ ತಿಂಗಳಲ್ಲಿ ಸಹನ ಶಕ್ತಿ ಪರೀಕ್ಷೆ ನಡೆಸಲಾಗಿತ್ತು.

ಅಭ್ಯರ್ಥಿಗಳಿಂದ ನಿಗದಿತ ಸಮಯದಲ್ಲಿ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಆಯ್ಕೆ ಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ htpps://kptcl.karnataka.gov.in/recruitment ಪ್ರಕಟಿಸಲಾಗಿದೆ. ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ನಡೆದಿರುವ ಕಿರಿಯ ಪವರ್‌ಮ್ಯಾನ್‌ ಹುದ್ದೆಯ ನೇಮಕಾತಿಗೆ ಆಯ್ಕೆ ಪಟ್ಟಿಗಳನ್ನು ಶೀಘ್ರವೇ ಪ್ರಕಟಿಸುವುದಾಗಿ ಇಂಧನ ಇಲಾಖೆಯ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.