ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) 622 ಹುದ್ದೆಗಳ ನೇಮಕಾತಿ ಡಿ.27 ಮತ್ತು 28ರಂದು ನಡೆದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.
ಪರೀಕ್ಷೆ ನಡೆದು ಎಂಟು ದಿನಗಳಲ್ಲೇ ಫಲಿತಾಂಶವನ್ನೂ ಪ್ರಕಟಿಸಿದ್ದು, ಆಕ್ಷೇಪಣೆಗಳು ಇದ್ದಲ್ಲಿ ಜ.7ರ ಒಳಗೆ ಸಲ್ಲಿಸಬಹುದು. ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ಅಂತಿಮ ಅಂಕಪಟ್ಟಿಯನ್ನೂ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.
ಹಿಂದೆ ನಡೆಸಲಾಗಿದ್ದ ನೇಮಕಾತಿ ಪರೀಕ್ಷೆಯ ಫಲಿತಾಂಶಗಳನ್ನು ಸುಪ್ರೀಂ ಕೋರ್ಟ್ ಆದೇಶದಂತೆ ರದ್ದು ಮಾಡಲಾಗಿತ್ತು. ಬಳಿಕ, ಕೆಮಿಕಲ್ ಸೂಪರ್ ವೈಸರ್, ಔಷಧ ಮೇಲ್ವಿಚಾರಕರು, ವಿವಿಧ ವಿಭಾಗಗಳ ಸಹಾಯಕ ಎಂಜಿನಿಯರ್‌ಗಳು, ವಿವಿಧ ವಿಭಾಗಗಳ ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ಎಲ್ಲ ಹುದ್ದೆಗಳಿಗೂ ಮರು ಪರೀಕ್ಷೆ ನಡೆಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.