ADVERTISEMENT

ಕೆಪಿಟಿಸಿಎಲ್‌ ಅಕ್ರಮ: ಮತ್ತೆ ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 4 ಜನವರಿ 2023, 12:30 IST
Last Updated 4 ಜನವರಿ 2023, 12:30 IST
ಚಿದಾನಂದ
ಚಿದಾನಂದ   

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಬುಧವಾರ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈವರೆಗೆ ಬಂಧಿತರಾದವರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ.

ಗೋಕಾಕ ತಾಲ್ಲೂಕಿನ ಮಲ್ಲಾಪುರ ಪಿ.ಜಿ. ಗ್ರಾಮದ ಅಣ್ಣಪ್ಪ ಕೆಂಪಣ್ಣ ಮಾರವಾಡಿ(31), ಶಿವಾಪುರದ ಜಾನ್‌ರಾಬರ್ಟ್ ಯಶವಂತ ಬಂಗೆನ್ನವರ(26), ಮೂಡಲಗಿ ತಾಲ್ಲೂಕಿನ ರಾಜಾಪುರದ
ಚಿದಾನಂದ ಚಿನ್ನಪ್ಪ ಮಾಡಲಗಿ(27) ಬಂಧಿತರು.

‘ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ಬಳಸಿ, ಮೂವರು ಆರೋಪಿಗಳು ಪರೀಕ್ಷೆ ಬರೆದಿದ್ದರು. ಅವರಿಂದ ಅಕ್ರಮಕ್ಕೆ ಬಳಸಿದ ಎಲ್ಲ ಸಾಮಗ್ರಿಗಳ ವಶಕ್ಕೆ ಪಡೆಯಲಾಗಿದೆ. ಎಲ್ಲ ಆರೋಪಿತರು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಂಜೀವ್‌ ಪಾಟೀಲ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.