ADVERTISEMENT

ಜೆಡಿಎಸ್‌ ಶಾಸಕ ಕೃಷ್ಣಾರೆಡ್ಡಿ ಉಪಸಭಾಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 6 ಜುಲೈ 2018, 19:26 IST
Last Updated 6 ಜುಲೈ 2018, 19:26 IST
ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಿಧಾನ ಸಭಾ ಕಲಾಪದಲ್ಲಿ ನೂತನ ಉಪಸಭಾಪತಿ ಎಂ.ಕೃಷ್ಣಾರೆಡ್ಡಿ ಕಲಾಪ ನಡೆಸಿಕೊಟ್ಟರು -ಪ್ರಜಾವಾಣಿ ಚಿತ್ರ
ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಿಧಾನ ಸಭಾ ಕಲಾಪದಲ್ಲಿ ನೂತನ ಉಪಸಭಾಪತಿ ಎಂ.ಕೃಷ್ಣಾರೆಡ್ಡಿ ಕಲಾಪ ನಡೆಸಿಕೊಟ್ಟರು -ಪ್ರಜಾವಾಣಿ ಚಿತ್ರ   

ಬೆಂಗಳೂರು: ವಿಧಾನಸಭೆಯ ಉಪಾಧ್ಯಕ್ಷರಾಗಿ ಜೆಡಿಎಸ್‌ನ ಚಿಂತಾಮಣಿ ಶಾಸಕ ಎಂ.ಕೃಷ್ಣಾರೆಡ್ಡಿ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.

ಒಂದೇ ನಾಮಪತ್ರ ಸಲ್ಲಿಕೆ ಆಗಿದ್ದರಿಂದ ಸಭಾಧ್ಯಕ್ಷ ರಮೇಶಕುಮಾರ್‌, ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು. 51 ವರ್ಷದ ಕೃಷ್ಣಾರೆಡ್ಡಿ ಎರಡನೇ ಬಾರಿಗೆ ಶಾಸಕರಾಗಿದ್ದಾರೆ.

ಉಪಸಭಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ‘ಕಲಾಪವನ್ನು ಸುಗಮವಾಗಿ ನಡೆಸಲು ಅವರಿಗೆ ಮಾರ್ಗದರ್ಶನ ಮಾಡಬೇಕು’ ಎಂದು ಸಭಾಧ್ಯಕ್ಷರಿಗೆ ವಿನಂತಿಸಿದರು.

ADVERTISEMENT

ವಿಧಾನಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳೆರಡೂ ಅವಿಭಜಿತ ಕೋಲಾರ ಜಿಲ್ಲೆಗೆ ಒಲಿದಂತಾಗಿದೆ. ಹಿಂದಿನ (ಎನ್‌.ಎಚ್‌.ಶಿವಶಂಕರರೆಡ್ಡಿ) ಹಾಗೂ ಈಗಿನ ಉಪಸಭಾಧ್ಯಕ್ಷರು ಚಿಕ್ಕಬಳ್ಳಾಪುರ ಜಿಲ್ಲೆಗೆ ಸೇರಿದವರೇ ಆಗಿರುವುದು ವಿಶೇಷ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.