ನವದೆಹಲಿ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ನೇತೃತ್ವದಲ್ಲಿ ಇದೇ 7ರಂದು ನಿಗದಿಯಾಗಿದ್ದ ಕೃಷ್ಣಾ ಕಣಿವೆ ವ್ಯಾಪ್ತಿಯ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆ ಕೊನೆಯ ಕ್ಷಣದಲ್ಲಿ ಮುಂದೂಡಿಕೆಯಾಗಿದೆ.
ಕೃಷ್ಣಾ ಜಲವಿವಾದ ನ್ಯಾಯಮಂಡಳಿ 2010ರಲ್ಲಿ ತೀರ್ಪು ನೀಡಿತ್ತು. ರಾಜ್ಯಕ್ಕೆ 173 ಟಿಎಂಸಿ ಅಡಿ ನೀರು ಬಳಸಿಕೊಳ್ಳಲು ಅನುಮತಿ ನೀಡಲಾಗಿತ್ತು. ಅಂತಿಮ ತೀರ್ಪು ನೀಡಿ 15 ವರ್ಷಗಳಾಗಿವೆ. ಆದರೆ, ಇಲ್ಲಿಯವರೆಗೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ. ಈ ನಡುವೆ, ಸುಪ್ರೀಂ ಕೋರ್ಟ್‌ನಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಸಹ ಅರ್ಜಿ ಸಲ್ಲಿಸಿವೆ.
ಈ ಸಭೆಗೆ ಹಾಜರಾಗುವ ಉದ್ದೇಶದಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ರಾತ್ರಿ ನವದೆಹಲಿಗೆ ಬಂದರು. ಸಭೆ ಮುಂದೂಡಿಕೆಯಾಗಿರುವುದರಿಂದ ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಭೇಟಿ ಮಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.