ADVERTISEMENT

‘ಕೃಷ್ಣಾ ಜಲವಿವಾದ ತೆಲಂಗಾಣದ ಬಗ್ಗೆ ಮೃದು ಧೋರಣೆ’

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 3:22 IST
Last Updated 23 ಅಕ್ಟೋಬರ್ 2020, 3:22 IST

ಹುಬ್ಬಳ್ಳಿ: ಕೃಷ್ಣಾ ನದಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ತೆಲಂಗಾಣ ರಾಜ್ಯದ ಬಗ್ಗೆ ಮೃದು ಧೋರಣೆ ತೋರುತ್ತಿದೆ ಎಂದು ಶಾಸಕ ಎಚ್.ಕೆ.ಪಾಟೀಲ ಆರೋಪಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಜಲ ಸಂಪನ್ಮೂಲ ಸಚಿವರು ಸುಪ್ರೀಂ ಕೋರ್ಟ್‌
ನಲ್ಲಿ ಕೇಸ್‌ ಹಿಂಪಡೆದು, ನ್ಯಾಯಮಂಡಳಿ ಯಲ್ಲಿ ಬಗೆಹರಿಸಿಕೊಳ್ಳಬೇಕು ಎಂದಿ ದ್ದಾರೆ. ಕೃಷ್ಣಾ ಜಲ ವಿವಾದ ಮುಗಿದು ಹೋಗಿದ್ದು, ಮತ್ತೆ ನ್ಯಾಯಮಂಡಳಿಯಲ್ಲಿ ವಿಚಾರಣೆ ಅಗತ್ಯವಿಲ್ಲ ಎಂದರು.

ಈಗಾಗಲೇ ನೀರು ಹಂಚಿಕೆಯಾಗಿದೆ. ಆಂಧ್ರಪ್ರದೇಶಕ್ಕೆ ಹಂಚಿಕೆಯಾದ ನೀರಿನಲ್ಲಿಯೇ ಎರಡೂ ರಾಜ್ಯಗಳು ಹಂಚಿಕೆ ಮಾಡಿಕೊಳ್ಳಬೇಕು. ಈ ವಿಷಯದಲ್ಲಿ ರಾಜ್ಯ ಸರ್ಕಾರ ತೀವ್ರವಾಗಿ ಪ್ರತಿಕ್ರಿಯಿಸಬೇಕು. ಅವಶ್ಯಕತೆ ಬಿದ್ದರೆ, ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಬೇಕು ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.