ಬೆಂಗಳೂರು: ಕೃಷ್ಣಾ ಮೇಲ್ದಂಡೆ ಮೂರನೇ ಹಂತ ಪೂರ್ಣಗೊಳಿಸಲು ಅಂದಾಜು 1 ಲಕ್ಷ ಕೋಟಿ ಮೊತ್ತ ಬೇಕಾಗಲಿದೆ. ಈ ಹಿಂದೆ ನಿಗದಿಯಾಗಿದ್ದ ಪರಿಹಾರಕ್ಕೆ ₹87 818 ಕೋಟಿ ಬೇಕಾಗುತ್ತದೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮವು ಮಾರ್ಚ್ ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಅದರಲ್ಲಿ ಒಣ ಬೇಸಾಯಕ್ಕೆ ₹30 ಲಕ್ಷ ನೀರಾವರಿ ಭೂಮಿಗೆ ₹35 ಲಕ್ಷಕ್ಕೆ ಹೆಚ್ಚಿಸಿದರೆ ಅಂದಾಜು ವೆಚ್ಚ ₹96006 ಕೋಟಿಗೆ ಹೆಚ್ಚಲಿದೆ ಎಂದಿತ್ತು. ಈಗ ರಾಜ್ಯ ಸರ್ಕಾರ ಅದಕ್ಕಿಂತಲೂ ಹೆಚ್ಚಿನ ದರ ನಿಗದಿ ಮಾಡಿರುವುದರಿಂದ ವೆಚ್ಚ ಲಕ್ಷ ಕೋಟಿ ದಾಟಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ವರ್ಷಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವ ಮಾತುಗಳನ್ನಾಡಿದ್ದಾರೆ. ₹70 ಸಾವಿರ ಕೋಟಿ ಬೇಕಾಗಬಹುದು ಎಂದಿದ್ದಾರೆ. ಆದರೆ ವಾಸ್ತವದಲ್ಲಿ ಅಂದಾಜು ವೆಚ್ಚ ಇನ್ನಷ್ಟು ಹೆಚ್ಚಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.