ಬೆಂಗಳೂರು ದಕ್ಷಿಣ ತಾಲ್ಲೂಕು ಕಚೇರಿಗೆ ಭೇಟಿ ನೀಡಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೆಲಸದಲ್ಲಿ ಅನಗತ್ಯ ವಿಳಂಬ ಆಗುತ್ತಿರುವ ಬಗ್ಗೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ‘ಕಡತ ರವಾನೆ ಮಾಡಲು ಎಷ್ಟು ಕೊಡಬೇಕು? ಅದಕ್ಕೆಲ್ಲಾ ಹಣ ಫಿಕ್ಸ್ ಮಾಡಿದ್ದೀರಿ ಎಂಬುದು ಗೊತ್ತಿದೆ. ನಾನು ಹೇಳದಿದ್ದರೂ, ಜನ ಹೇಳುತ್ತಾರೆ. ಎಷ್ಟು ಕೊಡಬೇಕು ಎಂಬುದರಲ್ಲೂ ಪಾರದರ್ಶಕತೆ ತಂದು ಬಿಡಿ. ರೇಟ್ ವಿವರಿಸುವ ಬೋರ್ಡ್ ಹಾಕಿಬಿಡಿ’ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.