ADVERTISEMENT

KRS ಹಿನ್ನೀರಿನಲ್ಲಿ ಜಲ ವಿಮಾನಯಾನ ಕ್ರೀಡೆ: ರಾಮಮೋಹನ್‌ ನಾಯ್ಡು–ಎಚ್‌ಡಿಕೆ ಚರ್ಚೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಸೆಪ್ಟೆಂಬರ್ 2025, 10:34 IST
Last Updated 16 ಸೆಪ್ಟೆಂಬರ್ 2025, 10:34 IST
<div class="paragraphs"><p>ಎಚ್.ಡಿ. ಕುಮಾರಸ್ವಾಮಿ&nbsp;ಮತ್ತು ರಾಮಮೋಹನ್‌ ನಾಯ್ಡು</p></div>

ಎಚ್.ಡಿ. ಕುಮಾರಸ್ವಾಮಿ ಮತ್ತು ರಾಮಮೋಹನ್‌ ನಾಯ್ಡು

   

ನವದೆಹಲಿ: ಕೆಆರ್‌ಎಸ್‌ ಹಿನ್ನೀರಿನಲ್ಲಿ ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ (ಸೀ ಪ್ಲೇನ್‌) ಕ್ರೀಡೆ ಆಯೋಜಿಸಲು ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಸಚಿವ, ಜೆಡಿಎಸ್‌ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್‌ ನಾಯ್ಡು ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

‘ರಾಮಮೋಹನ್‌ ನಾಯ್ಡು ಅವರನ್ನು ಭೇಟಿ ಮಾಡಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ವಿಮಾನಯಾನ ಯೋಜನೆಗಳ ಕುರಿತು ಚರ್ಚೆ ನಡೆಸಿದ್ದೇನೆ. ಜತೆಗೆ, ದಸರಾ ಸಮಯದಲ್ಲಿ ಕೆಆರ್‌ಎಸ್ ಹಿನ್ನೀರಿನಲ್ಲಿ ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ (ಸೀ ಪ್ಲೇನ್‌) ಕ್ರೀಡೆಗಳನ್ನು ಆಯೋಜಿಸಲು ಅನುಮೋದನೆ ಕೋರಿ ಮನವಿ ಪತ್ರ ಸಲ್ಲಿಸಿದ್ದೇನೆ’ ಎಂದು ಕುಮಾರಸ್ವಾಮಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ADVERTISEMENT

‘ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ ಕ್ರೀಡೆಗಳು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸುತ್ತವೆ’ ಎಂದು ಅವರು ತಿಳಿಸಿದ್ದಾರೆ.

‘ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸಲು ಹಾಸನ ವಿಮಾನ ನಿಲ್ದಾಣದ ಕಾಮಗಾರಿಗಳನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದೇನೆ. ಜತೆಗೆ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಯೋಜನೆಯ ಪ್ರಗತಿಯ ಬಗ್ಗೆಯೂ ನಾಯ್ಡು ಅವರೊಂದಿಗೆ ಚರ್ಚಿಸಿದ್ದೇನೆ’ ಎಂದು ಎಚ್‌ಡಿಕೆ ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.