ಶಿವಮೊಗ್ಗ: ‘ಯಾವನೋ ಕುಡಿದುಕೊಂಡು ಹೋಗಿ ಮುಖ್ಯಮಂತ್ರಿ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಿದರೆ ಅದಕ್ಕೆ ನಾನು ಉತ್ತರಿಸಬೇಕಾ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹರಿಹಾಯ್ದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಅವರು ಮಾತ ನಾಡಿದರು. ‘ಬಿ.ಎಸ್. ಯಡಿಯೂರಪ್ಪ ಅವರು ಕಾಂಗ್ರೆಸ್, ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದಾರೆ. ಸ್ವಪಕ್ಷಿಯರನ್ನೇ ಕಡೆಗಣಿಸುತ್ತಿದ್ದಾರೆ ಎಂದು ಬಿಜೆಪಿ ಶಾಸಕರು ಹೈಕಮಾಂಡ್‌ಗೆ ದೂರು ನೀಡುತ್ತಿರುವುದು ನಿಜವೇ’ ಎಂಬ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.